ಕೊರೊನಾ ವಾರಿಯರ್ಸ್‍ಗೆ ಪುಷ್ಪಾಲಂಕಾರದ ಗೌರವ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.11- ಕೊರೊನಾ ವಾರಿಯರ್ಸ್‍ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಮರ್ಪಣೆ ಮಾಡುವ ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಡಾ.ನಾರಾಯಣಗೌಡ ಚಾಲನೆ ನೀಡಿದರು.

ವಿಧಾನಸೌಧದ ಮುಂಭಾಗ ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು.

1,72,000 ಹೂ.ಗಳನ್ನು ಬಳಸಿ ಅಲಂಕಾರ ಮಾಡಲಾಗಿದೆ. ಇಂದಿನಿಂದ ಬೆಂಗಳೂರಿನ ವಿವಿಧೆಡೆ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ನಿರ್ದೇಶಕ ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.

Facebook Comments