ಮತ್ತೊಬ್ಬ ಕೊರೊನಾ ವಾರಿಯರ್ಸ್ ಮಹಾಮಾರಿಗೆ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.4- ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಕೊರೊನಾ ವಾರಿಯರ್ಸ್ ನರ್ಸ್ ಒಬ್ಬರು ಬಲಿಯಾಗಿದ್ದಾರೆ. ಲಿಂಗರಾಜಪುರ ನಿವಾಸಿಯಾಗಿರುವ ನರ್ಸ್ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇತ್ತೀಚೆಗೆ ಅವರು ಸೋಂಕು ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ನರ್ಸ್‍ಗೆ ಸೋಂಕು ತಗುಲಿರುವ ಬಗ್ಗೆ ವೈದ್ಯರು ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದು, ಆಕೆಯೊಂದಿಗೆ ಪ್ರಾಥಮಿಕ ಸಂಪರ್ಕವಿರಿಸಿಕೊಂಡಿದ್ದವರ ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

10 ಸಿಬ್ಬಂದಿಗೆ ಸೋಂಕು: ಸಂಜಯ್‍ಗಾಂಧಿ ಆಸ್ಪತ್ರೆಯ 10 ಸಿಬ್ಬಂದಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಆಸ್ಪತ್ರೆ ಸಿಬ್ಬಂದಿಗಳಿಗೆ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಾಬ್ ಪರೀಕ್ಷೆ ನಡೆಸಲಾಗಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ.

Facebook Comments