ಕೊರೊನಾ ವಾರಿಯರ್ಸ್‍ಗೆ ನೀಡುವ ಪರಿಹಾರದ ಮೊತ್ತ 50 ಲಕ್ಷಕ್ಕೆ ಏರಿಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 5-ಕೋವಿಡ್ 19 ರೋಗ ವಿರುದ್ಧ ಹೋರಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು ಮತ್ತಿತರ ಸಿಬ್ಬಂದಿಗೆ ಮನೋಸ್ಥೈರ್ಯ ಹೆಚ್ಚಿಸಲು 50 ಲಕ್ಷ ರೂ.ಪರಿಹಾರ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹರಡದಂತೆ ತಡೆಗಟ್ಟುವ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಹೋಮ್ ಗಾಡ್ರ್ಸ್, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ನೌಕರರು, ಅಧಿಕಾರಿಗಳು, ಬಂದೀಖಾನೆ ಸಿಬ್ಬಂದಿಗಳು ಪೌರ ಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, ಅವರಿಗೆ ಸಂಬಂಧಿಸಿದ ವಾಹನಗಳ ಚಾಲಕರು,

ಲೋಡರ್‍ಗಳನ್ನು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಂತೆ ಕೊರೊನಾ ಸೋಂಕಿನಿಂದ ಮೃತರಾದಲ್ಲಿ, ಅಥವಾ ಕೋವಿಡ್- 19ರ ಕಾರ್ಯದಲ್ಲಿ ತೊಡಗಿದ್ದಾಗ ಮೃತರಾದಲ್ಲಿ 50 ಲಕ್ಷ ರೂ.ಪರಿಹಾರ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಮಾರ್ಗಸೂಚಿಗಳಂತೆ ಈ ಮೇಲ್ಕಂಡವರು ಕೋವಿಡ್ ಕೆಲಸದಲ್ಲಿ ಪಾಲ್ಗೊಂಡಿದ್ದು ಅವರ ಮನೋಸ್ಥೈರ್ಯ ಹೆಚ್ಚಿಸಲು 50 ಲಕ್ಷ ರೂ.ಪರಿಹಾರ ಒದಗಿಸಲು ಆರ್ಥಿಕ ಇಲಾಖೆ ಮಂಜೂರಾತಿ ನೀಡಿ ಆದೇಶಿಸಿದೆ.

ಕೋವಿಡ್ -19 ರೋಗದಿಂದ ಮೃತರಾದಲ್ಲಿ ಅಥವಾ ಈ ರೋಗದ ವಿರುದ್ಧ ಕೆಲಸದಲ್ಲಿರುವ ಈ ಮೇಲ್ಕಂಡ ವರ್ಗದವರಿಗೆ ಈ ಪರಿಹಾರ ಅನ್ವಯವಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Facebook Comments

Sri Raghav

Admin