ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೊನಾ ಮರಣಮೃದಂಗ, ಕಾಲೇಜಿನ ಡೀನ್ ಸೇರಿ ಮತ್ತಿಬ್ಬರು ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.27-ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಎಂಜಿನಿಯರಿಂಗ್ ಕಾಲೇಜಿನ ಡೀನ್ ಸೇರಿದಂತೆ ಇಂದು ಮತ್ತಿಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.  ಪ್ರತಿಷ್ಠಿತ ಕಾಲೇಜಿನ ಡೀನ್ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 50 ವರ್ಷ ವಯಸ್ಸಿನ ಡೀನ್‍ಗೆ ಸೋಂಕು ಕಾಣಿಸಿಕೊಂಡಿತ್ತು.

ತಕ್ಷಣ ಅವರನ್ನು ಸೆಂಟ್‍ಜಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಡೀನ್ ಪತ್ನಿಗೂ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಇಎಸ್‍ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಕೊರೊನಾ ಸೋಂಕಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 83 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ನಗರದಲ್ಲಿ ಸಾವಿನ ಸರಪಳಿ ಮುಂದುವರಿದಿದ್ದು, ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನಗರವನ್ನು ಶುಚಿಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿಬಿಎಂಪಿ ಪೌರ ಕಾರ್ಮಿಕರಿಗೂ ಕೊರೊನಾ ಕಾಟ ಆರಂಭವಾಗಿದೆ.

19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೌರ ಕಾರ್ಮಿಕರೊಂದಿಗೆ ಸಂಪರ್ಕವಿರಿಸಿಕೊಂಡಿದ್ದವರ ಪತ್ತೆ ಕಾರ್ಯಾಚರಣೆಯನ್ನು ಬಿಬಿಎಂಪಿ ಕೈಗೊಂಡಿದೆ.

ಪ್ರತಿನಿತ್ಯ ನೂರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆಷ್ಟು ಮಂದಿ ಸೋಂಕಿಗೆ ಸಿಲುಕುತ್ತಾರೋ ಎಂಬ ಆತಂಕ ಕಾಡುತ್ತಿದೆ.

Facebook Comments