ಕೊರೋನಾ 2ನೇ ಅಲೆ ಭೀತಿ, ಹೊಸ ವರ್ಷಾಚರಣೆಗೆ ಬ್ರೇಕ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.4- ಮುಂಬರುವ ಜನವರಿ, ಫೆಬ್ರವರಿ ತಿಂಗಳಿನಲ್ಲಿ ಕೋವಿಡ್-19ರ ಎರಡನೆ ಅಲೆ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಲು ಮುಂದಾಗಿದ್ದು ಕ್ರಿಸ್‍ಮಸ್, ಹೊಸ ವರ್ಷಾಚರಣೆ ಸೇರಿದಂತೆ ಧಾರ್ಮಿಕ ಸಭೆ ಸಮಾರಂಭಗಳು, ಮದುವೆಗಳಿಗೆ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಸುವ ಸಾಧ್ಯಗಳಿವೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ 54 ಸಭೆಗಳನ್ನು ನಡೆಸಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಶಿಫಾರಸು ಅನುಷ್ಠಾನಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದರು.

ಸದ್ಯಕ್ಕೆ ಕಫ್ರ್ಯೂ ವಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಆನರು ಸ್ವಪ್ರೇರಣೆಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಮ್ಮ ಜೀವ ನಿಮ್ಮ ಕೈಯಲ್ಲೇ ಇದೆ. ಅನಗತ್ಯವಾಗಿ ಯಾರೂ ಕೂಡ ಮನೆಯಿಂದ ಹೊರಗೆ ಬರಬಾರದು ಎಂದರು.

ಡಾ.ಸುದರ್ಶನ್ ನೇತೃತ್ವದ ಸಮಿತಿಯು ಮಾರುಕಟ್ಟೆ, ಧಾರ್ಮಿಕ ಕೇಂದ್ರಗಳು, ಸಭೆ ಸಮಾರಂಭಗಳು ಸೇರಿದಂತೆ ಹೆಚ್ಚು ಜನ ಸೇರುವ ಕಡೆಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಬಗ್ಗೆ ಶಿಫಾರಸ್ಸು ಮಾಡಿದೆ. ಮದುವೆ ನೂರು ಜನ, ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ 200 ಜನ, ಅಂತ್ಯಕ್ರಿಯೆಗೆ 50 ಜನಕ್ಕೆ ಸೀಮಿತಗೊಳಿಸಲಾಗಿದೆ. ಡಿ. 20ರಿಂದ ಜನವರಿ 2ರವರೆಗೂ ಹೆಚ್ಚು ಜನರು ಸೇರುವ ಸಾಧ್ಯತೆಯಿದ್ದು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿದೆ ಎಂದು ಹೇಳಿದರು.

ರೋಗ ಲಕ್ಷಣ ಉಳ್ಳವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಡಿಸೆಂಬರ್ ಮೂರನೇ ವಾರದಲ್ಲಿ ಶಾಲಾ ಕಾಲೇಜು ತೆರೆಯಲು ನಿರ್ಧಾರ ಕೈಗೊಳ್ಳಲಾಗುವುದು. ಎರಡನೇ ಅಲೆ ತಡೆಯಲು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಯಾವುದೇ ಕಾರಣಕ್ಕೂ ಟೆಸ್ಟ್‍ಗಳನ್ನು ಕಡಿಮೆ ಮಾಡುವಂತಿಲ್ಲ. ಪ್ರತಿದಿನ 1,25,000 ಟೆಸ್ಟ್‍ಗಳು ನಡೆಯಬೇಕು. ಮೂರನೇ ಹಂತದ ಕ್ಲಿನಿಕಲ್ ಟೆಸ್ಟ್ ನಡೆದಿದ್ದು ಲಸಿಕೆ ನೀಡಲು ಅಗತ್ಯವಿದ್ದರೆ ಖಾಸಗಿ ವಲಯವನ್ನು ಬಳಸಿಕೊಳ್ಳಲಾಗುವುದು ಎಂದರು.

ಹೈದರಾಬಾದ್ ಚುನಾವಣೆಯಲ್ಲಿ ಜನರ ಬಿಜೆಪಿ ಪರವಾಗಿ ಇದ್ದರು. ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ಅಕಾರ ಹಿಡಿಯುವುದು ಖಚಿತ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.  ಹೈದರಾಬಾದ್‍ನಲ್ಲಿ ಬಿಜೆಪಿಯವರು ಮೇಯರ್ ಆಗುತ್ತಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಹಾಗಾಗಿ ಗೆಲ್ಲುವ ವಿಶ್ವಾಸವಿತ್ತು ಎಂದರು.

Facebook Comments

Sri Raghav

Admin