ಅಮೆರಿಕದಲ್ಲಿ 4.80 ಲಕ್ಷ ರೋಗಿಗಳು ಗುಣಮುಖ,11.45 ಲಕ್ಷ ಸಕ್ರಿಯ ಪ್ರಕರಣಗಳ ಆತಂಕ..!

ಈ ಸುದ್ದಿಯನ್ನು ಶೇರ್ ಮಾಡಿ

ನ್ಯೂಯಾರ್ಕ್/ವಾಷಿಂಗ್ಟನ್, ಮೇ 27- ಕಿಲ್ಲರ್ ಕೊರೊನಾ ವೈರಸ್ ದಾಳಿಯಿಂದ ತತ್ತರಿಸುತ್ತಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1,00,572ಕ್ಕೇರಿದೆ. ಈವರೆಗೆ 17,25,275 ಮಂದಿಗೆ ಸೋಂಕು ತಗುಲಿದ್ದು, ಇನ್ನೂ 17,158 ಸಾಂಕ್ರಾಮಿಕ ರೋಗಿಗಳ ಸ್ಥಿತಿ ಶೋಚನೀಯವಾಗಿದೆ.

ಈ ನಡುವೆ, ಅಮೆರಿಕದಲ್ಲಿ 4,79,969 ಮಂದಿ ಗುಣಮುಖರಾಗಿದ್ದಾರೆ. ಆದರೆ, 11,44,734 ಸಕ್ರಿಯ ಪ್ರಕರಣಗಳು ದಾಖಲಾಗಿರುವುದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯನ್ನು ಸೃಷ್ಟಿಸಿದೆ.

ವಿಶ್ವದ ಸೂಪರ್‍ಪವರ್ ದೇಶ ಸೋಂಕು ಮತ್ತು ಸಾವು ಪ್ರಮಾಣದಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಅಮೆರಿಕದಲ್ಲಿ ಪ್ರತಿದಿನ ಸರಾಸರಿ 1500ಕ್ಕೂ ಹೆಚ್ಚು ಮಂದಿ ಸಾವಿಗೀಡಾಗುತ್ತಿದ್ದು, ಸೋಂಕಿನ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬಂದಿದೆ.

ಅಮೆರಿಕದ ಬಹುತೇಕ 50 ಪ್ರಾಂತ್ಯಗಳಲ್ಲಿಯೂ ಸಾವು ಮತ್ತು ಸೋಂಕು ಸಾಮಾನ್ಯ ಸಂಗತಿಯಾಗಿದೆ. ಜಗತ್ತಿನ ಮಹಾ ಶಕ್ತಿಶಾಲಿ ದೇಶ ಅಮೆರಿಕ ಕೊರೊನಾ ಸೋಂಕು ಮತ್ತು ಸಾವಿನಲ್ಲಿ ಮೊದಲ ಸ್ಥಾನದಲ್ಲಿದ್ದು, ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ.

ಆ ರಾಷ್ಟ್ರದಲ್ಲಿ ಸುಮಾರು 3.95 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 24,594ಕ್ಕೇರಿದೆ. ನಂತರದ ಸ್ಥಾನಗಳಲ್ಲಿ ರಷ್ಯಾ, ಸ್ಪೇನ್ ಮತ್ತು ಬ್ರಿಟನ್ ದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವಿನ ಪ್ರಕರಣಗಳು ದಾಖಲಾಗಿರುವ ವಿಶ್ವದ ಟಾಪ್ ಟೆನ್ ದೇಶಗಳಲ್ಲಿ ಇಟಲಿ, ಫ್ರಾನ್ಸ್, ಜರ್ಮನಿ, ಟರ್ಕಿ ಮತ್ತು ಭಾರತ ಇದೆ.

Facebook Comments