24 ಗಂಟೆಗಳಲ್ಲಿ 78,357 ಪಾಸಿಟಿವ್, ಭಾರತದಲ್ಲಿ 37 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.2-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37 ಲಕ್ಷ ಗಡಿ ದಾಟಿದ್ದು , 78,357 ಹೊಸ ಪ್ರಕರಣಗಳು ದಾಖಲಾಗಿದೆ. ಇದರ ಬೆನ್ನಲ್ಲೇ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ದ್ವಿಗುಣಗೊಳ್ಳುತ್ತಿರುವುದು ಸಮಾಧಾನ ತಂದಿದೆ.

37 ಲಕ್ಷ ಸೋಂಕಿತರ ಸಂಖ್ಯೆಯಲ್ಲಿ ಈಗಾಗಲೇ 29 ಲಕ್ಷ ಮಂದಿ ಗುಣಮುಖರಾಗಿದ್ದು , ಸೋಂಕು ಮುಕ್ತರ ಸಂಖ್ಯೆ ಶೇ.76.98ರಷ್ಟು ಏರಿಕೆಯಾಗಿರುವುದು ಕೇಂದ್ರ ಆರೋಗ್ಯ ಇಲಾಖೆ ಬುಲೆಟಿನ್‍ನಲ್ಲಿ ಬಯಲಾಗಿದೆ.

ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 66,333ಕ್ಕೆ ಏರಿಕೆಯಾಗಿದ್ದು , ಕಳೆದ 24 ಗಂಟೆಗಳಲ್ಲಿ 1,045 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ದೇಶದಲ್ಲಿ 37,69,523 ಸೋಂಕಿತರಿದ್ದು , ಇವರಲ್ಲಿ 29,01,908 ಸೋಂಕಿತರು ಗುಣಮುಖರಾಗಿದ್ದಾರೆ. ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಶೇ.1.76ರಷ್ಟು ಇಳಿಕೆಯಾಗಿದೆ.

ಆ.7ರ ವೇಳೆಗೆ 20 ಲಕ್ಷ ಮಂದಿಗೆ ಸೋಂಕು ತಗುಲಿದ್ದರೆ ಆ.23ರ ವೇಳೆಗೆ ಸೋಂಕಿತರ ಸಂಖ್ಯೆ 30 ಲಕ್ಷ ಗಡಿ ದಾಟಿದೆ.  ನಿನ್ನೆಯವರೆಗೂ 4,43,37,201ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢಪಡಿಸಿದೆ.

Facebook Comments