ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44376 ಮಂದಿಗೆ ಕೊವಿಡ್-19 ಸೋಂಕು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.25- ದೇಶದಲ್ಲಿ ಕೊರೊನಾ ಎರಡನೆ ಅಲೆಯ ಆತಂಕ ಹೆಚ್ಚುತ್ತಿರುವ ನಡುವೆಯಲ್ಲೇ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿವೆ. ಕಳೆದ 24 ಗಂಟೆಗಳಲ್ಲಿ 44,376 ಹೊಸ ಪ್ರಕರಣಗಳು ಪತ್ತೆಯಾಗಿದ್ದು , 481 ಮಂದಿ ಕೊನೆಯುಸಿರೆಳೆದಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬೆಳಗ್ಗೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಚಳಿ ಹೆಚ್ಚುತ್ತಿದ್ದಂತೆ ಸೋಂಕು ಹರಡುವ ಭೀತಿಯೂ ಕೂಡ ಹೆಚ್ಚುತ್ತಿದೆ. ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಬಹುತೇಕ ಉತ್ತರ ಭಾರತೀಯರಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ 92,22216ಕ್ಕೆ ಏರಿದ್ದು , ಮೃತರ ಸಂಖ್ಯೆ 1,35,000ಕ್ಕೆ ತಲುಪುತ್ತಿದೆ. ಸುಮಾರು 87 ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಹಲವೆಡೆ ಪರಿಸ್ಥಿತಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.

ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ತಾನದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು , ಇದು ಹೊಸ ಆತಂಕ ಸೃಷ್ಟಿಸಿದೆ. ಹಲವೆಡೆ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸಲಾಗಿದ್ದು , ಜಾಗೃತಿಯ ನಡುವೆಯೂ ಸೋಂಕಿತರು ಹೆಚ್ಚುತ್ತಿದ್ದಾರೆ.

Facebook Comments