ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ.

ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಉಲ್ಲೇಖಿಸಿವೆ. ಕೊರೊನಾ ಸೋಂಕಿತರ ಸಂಖ್ಯೆ 93,51,109 ಗಡಿ ದಾಟಿದ್ದು, ನಿನ್ನೆಯಿಂದಿಚೆಗೆ 485 ಹೊಸ ಸಾವಿನ ಪ್ರಕರಣಗಳು ದಾಖಲಾಗಿದೆ. ಇದುವರೆಗೂ ಸೋಂಕಿಗೆ 1,36,200 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರತಿನಿತ್ಯ ದೇಶದ್ಯಾಂತ ಲಕ್ಷಾಂತರ ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದ್ದು, ಹಂತ ಹಂತವಾಗಿ ಸೋಂಕು ನಿವಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದರೂ ಸೋಂಕಿತರ ಪ್ರಮಾಣ ಕೋಟಿಯತ್ತ ದಾಪುಗಾಲಿಡುತ್ತಿರುವುದರಿಂದ ಜನರು ಮತ್ತಷ್ಟು ಎಚ್ಚರಿಕೆ ವಹಿಸುವ ಅಗತ್ಯವಿದೆ.

Facebook Comments