ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 2,738 ಮಂದಿಗೆ ಪಾಸಿಟಿವ್, 73 ಸಾವು..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಒಂದೆಡೆ ರಾಜ್ಯ ಸರ್ಕಾರ ಕೊರೋನಾ ಮಹಾಮಾರಿಯನ್ನು ನಿಯಂತ್ತಿಸಲು ಹರಸಾಹಸ ನಡೆಸುತ್ತಿರುವ ಸಂದರ್ಭದಲ್ಲೇ ಇಂದೂ ಹೊಸದಾಗಿ ಮತ್ತೆ 2,738 ಜನರಿಗೆ ಪಾಸಿಟಿವ್ ಪ್ರಕರಣ ದೃಡಪಟ್ಟಿದೆ.

ಇನ್ನೊಂದು ಆಘಾತಕಾರಿ ಬೆಳವಣಿಗೆಯಲ್ಲಿ ಇಂದು ಒಂದೇ ದಿನ 73 ಸಾವಾಗಿದ್ದು, ಬೆಂಗಳೂರಿನಲ್ಲಿ 47 ಜನರನ್ನು ಕೊರೊನಾ ಬಲಿ ಪಡೆದುಕೊಂಡಿದೆ. ಇತ್ತ ಸಿಲಿಕಾನ್ ಸಿಟಿಯೊಳಗೆ ಶರವೇಗದಲ್ಲಿ ಸಾಗುತ್ತಿರುವ ಕೊರೊನಾ 1,315 ಜನರಿಗೆ ತಗುಲಿದೆ.

ರಾಜ್ಯದಲ್ಲಿ ಒಟ್ಟು 2738 ಮಂದಿಗೆ ಪಾಸಿಟಿವ್ ದೃಢಪಟ್ಟಿರುವುದರಿಂದ ಸೋಂಕಿತರ ಸಂಖ್ಯೆ 41,581ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 71 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಸೋಮವಾರ ಒಂದೇ ದಿನ 17,171 ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆ 8.39 ಲಕ್ಷ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ 1.82 ಇದೆ ಎಂದು ಸಚಿವರು ಹೇಳಿದರು.ಬೆಂಗಳೂರಿನಲ್ಲಿ ಸಾವಿನ ಸರಾಸರಿ ಶೇ.1.63 ಆಗಿದ್ದು, ರಾಜಧಾನಿಯಲ್ಲಿ 14,350 ಸಕ್ರಿಯ ಪ್ರಕರಣಗಳಿವೆ.

ಇವತ್ತು ರಾಜ್ಯದಲ್ಲಿ 838 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಾವಿನ ಸರಾಸರಿ ಶೇ.1.82 ಆಗಿದ್ದು, ಐಸಿಯುನಲ್ಲಿ 545 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಆರೋಗ್ಯ ಇಲಾಖೆಯ ಬಿಡುಗಡೆ ಮಾಡಿರುವ ಮಾಹಿತಿಯಂತೆ ಬೆಂಗಳೂರು ನಗರ 1315, ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106, ಕಲಬುರಗಿ 89, ವಿಜಯಪುರ 86, ಶಿವಮೊಗ್ಗ 74, ಧಾರವಾಡ 71, ಉಡುಪಿ 53, ತುಮಕೂರು 48, ರಾಯಚೂರು 45, ದಾವಣಗೆರೆ 45,

ಚಿಕ್ಕಬಳ್ಳಾಪುರ 42, ಉತ್ತರ ಕನ್ನಡ 37, ಬಾಗಲಕೋಟೆ 37, ಕೊಪ್ಪಳ 31, ಮಂಡ್ಯ 30, ಕೊಡಗು 29, ಬೆಳಗಾವಿ 27, ಹಾಸನ 25, ಬೀದರ್ 23, ಬೆಂಗಳೂರು ಗ್ರಾಮಾಂತರ 21, ಕೋಲಾರ 21, ಚಿಕ್ಕಮಗಳೂರು 10, ಚಾಮರಾಜನಗರ 9, ಚಿತ್ರದುರ್ಗ 8, ಗದಗ ಮತ್ತು ಹಾವೇರಿಯಲ್ಲಿ ತಲಾ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ.

Facebook Comments

Sri Raghav

Admin