ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಸಾವಿನ ಸೆಂಚುರಿ, ಇಂದು 4169 ಪಾಸಿಟಿವ್, 104 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು- ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹರಸಾಹಸ ನಡೆಸುತ್ತಿರುವ ಸಂದರ್ಭದಲ್ಲೇ ಇಂದು ದಾಖಲೆಯ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಬುಧವಾರ ಒಂದೇ ದಿನ ರಾಜ್ಯದಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿಹಾಕಲಾಗಿದ್ದು,ಬರೋಬ್ಬರಿ 4169 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇವತ್ತು 104 ಜನರನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ.ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2344 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4169 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 70 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 104 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಮರಣ ನರ್ತನಕ್ಕೆ ಇವತ್ತು 70 ಮಂದಿ ಬಲಿಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ.

ಇಡೀ ಬೆಂಗಳೂರನ್ನು ಕೊರೊನಾ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು 198 ವಾರ್ಡ್ ನಲ್ಲಿ 196 ವಾರ್ಡ್ ಗಳಲ್ಲಿ 50ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿವೆ. ಒಟ್ಟಾರೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರದ ಗಡಿ ದಾಟಿದೆ.

ರಾಜ್ಯದ ಏಳು ಜಿಲ್ಲೆಗಳಲ್ಲಿ ಲಾಕ್‌ಡೌನ್ ಇದ್ದರೂ ಸೋಂಕಿತರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇರುವುದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 24 ಗಂಟೆಗಳಲ್ಲಿ 1263 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 19,729 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 30,655 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ – 2344, ದಕ್ಷಿಣ ಕನ್ನಡ – 238, ಧಾರವಾಡ – 176, ವಿಜಯಪುರ – 144, ಮೈಸೂರು – 130, ಕಲಬುರಗಿ – 123, ಉಡುಪಿ – 113, ರಾಯಚೂರು – 101, ಬೆಳಗಾವಿ – 92, ಉತ್ತರ ಕನ್ನಡ – 79, ಚಿಕ್ಕಬಳ್ಳಾಪುರ – 77, ಬೀದರ್ – 53, ಶಿವಮೊಗ್ಗ – 46, ಬಳ್ಳಾರಿ – 44, ಗದಗ – 44, ಕೋಲಾರ – 43, ಬಾಗಲಕೋಟೆ – 39, ಯಾದಗಿರಿ – 34, ಕೊಪ್ಪಳ – 32, ಹಾಸನ – 31, ಬೆಂಗಳೂರು ಗ್ರಾಮಾಂತರ – 31, ಚಿಕ್ಕಮಗಳೂರು – 30, ದಾವಣಗೆರೆ – 25, ಚಿತ್ರದುರ್ಗ – 21, ಹಾವೇರಿ ಮತ್ತು ಕೊಡಗು – 18, ಚಾಮರಾಜನಗರ – 16, ತುಮಕೂರು – 12, ಮಂಡ್ಯ – 11 ಮತ್ತು ರಾಮನಗರ – 04 ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿದೆ.

Facebook Comments

Sri Raghav

Admin