ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 13550 ಮಂದಿ ಆಸ್ಪತ್ರೆಯಿಂದ ಬಿಡುಗಡೆ, 5778 ಪಾಸಿಟಿವ್, 74 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು ಇಂದು 5778 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 74 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 788551 ಕ್ಕೆ ಏರಿಕೆಯಾದರೆ 7922 ಕೊರೋನಾಗೆ 10770 ಮಂದಿ ಬಲಿಯಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 2807 ಜನರಿಗೆ ಕೊರೋನಾ ತಗುಲಿದ್ದು, 36 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 318366 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 3667 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 13550 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 684835 ಜನ ಗುಣಮುಖರಾಗಿದ್ದಾರೆ. ಉಳಿದಂತೆ 10770 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 940 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin