ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 4752 ಮಂದಿಗೆ ಪಾಸಿಟಿವ್, 98 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕಿಲ್ಲರ್ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 4752 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 139571ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 27 ಮಂದಿ ಸೇರಿದಂತೆ 98 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದು ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ 1497 ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 2693 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 4776 ಗುಣಮುಖರಾಗಿ ಬಿಡುಗಡೆಯಾಗಿದ್ದು ಈವರೆಗೆ ಒಟ್ಟು 62500 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 74469 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 36290 ಸಕ್ರಿಯ ಪ್ರಕರಣಗಳಿವೆ. 629 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

27989 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯ್ದಲ್ಲಿ ಈವರೆಗೆ ಒಟ್ಟು 1446558 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

Facebook Comments

Sri Raghav

Admin