ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 5619 ಮಂದಿಗೆ ಪಾಸಿಟಿವ್, 100 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಇಂದೂ ಕೂಡ ರಾಜ್ಯದಲ್ಲಿ ಹೊಸದಾಗಿ 5619 ಜನರಲ್ಲಿ ಸೋಂಕು ಪತ್ತೆಯಾಗಿದ್ದು. 100 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 151449ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 2804ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 1848 ಜನರಿಗೆ ಕೊರೋನಾ ತಗುಲಿದ್ದು, 29 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 64881 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ 1163 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 5407 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 74679 ಜನ ಗುಣಮುಖರಾಗಿದ್ದಾರೆ. ಉಳಿದಂತೆ 73958 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 633 ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 43638 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 1532654 ಮಂದಿಗೆ ಕೋರೋಣ ಟೆಸ್ಟ್ಮಾಡಲಾಗಿದೆ.

Facebook Comments

Sri Raghav

Admin