ಕೊರೋನಾ ಬುಲೆಟಿನ್ : ರಾಜ್ಯದಲ್ಲಿಂದು 6150 ಮಂದಿಗೆ ಪಾಸಿಟಿವ್, 39 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ದಿನೇ ದಿನೇ ಹೆಚ್ಚುತ್ತಲೇ ಇದ್ದು ಇಂದು 6976 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 35 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1033560 ಕ್ಕೆ ಏರಿಕೆಯಾದರೆ , ಒಟ್ಟು 12731 ಮಂದಿ ಬಲಿಯಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 4991 ಜನರಿಗೆ ಕೊರೋನಾ ತಗುಲಿದ್ದು, 25 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 460016 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 4718 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 2794 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 971556 ಜನ ಗುಣಮುಖರಾಗಿದ್ದಾರೆ. ಉಳಿದಂತೆ 49254 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 353ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin