ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 5773 ಮಂದಿಗೆ ಪಾಸಿಟಿವ್, 141 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಅಬ್ಬರ ಮುಂದುವರೆದಿದ್ದು 5773 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 141 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 404324 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 6534ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2942 ಜನರಿಗೆ ಕೊರೋನಾ ತಗುಲಿದ್ದು, 48 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 150523 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 2211 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8015 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 300770 ಜನ ಗುಣಮುಖರಾಗಿದ್ದಾರೆ. ಉಳಿದಂತೆ 97001 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 794 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 45421 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 3393676 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

# ಜಿಲ್ಲಾವಾರು ಇಂದು ಪತ್ತೆಯಾದ ಸೋಂಕಿತರ ಸಂಖ್ಯೆ ಈ ಕೆಳಕಂಡಂತಿದೆ :

Facebook Comments

Sri Raghav

Admin