ರಾಜ್ಯದಲ್ಲಿ ಕೊರೋನಾ ಮಹಾ ಸ್ಫೋಟ, ಇಂದು 7178 ಮಂದಿಗೆ ಪಾಸಿಟಿವ್, 93 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು ಅತಿ ಹೆಚ್ಚು 7178 ಜನರಲ್ಲಿ ಸೋಂಕು ಪತ್ತೆಯಾಗಿದ್ದು. 93 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 172102ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 3091ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2665 ಜನರಿಗೆ ಕೊರೋನಾ ತಗುಲಿದ್ದು, 18 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 72237 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ 1218 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 5006 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 89238 ಜನ ಗುಣಮುಖರಾಗಿದ್ದಾರೆ. ಉಳಿದಂತೆ 79765 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 683 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 438883 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 1668511 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

ಬೆಂಗಳೂರು ನಗರ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (607), ಉಡುಪಿ (313), ಬೆಳಗಾವಿ (302),ರಾಯಚೂರು (295), ಕಲಬುರಗಿ (261), ಧಾರವಾಡ (261),ಯಾದಗಿರಿ (200), ದಕ್ಷಿಣ ಕನ್ನಡ(194), ತುಮಕೂರು (177) ಕೊಪ್ಪಳ (163),ಬಾಗಲಕೋಟೆ (149), ವಿಜಯಪುರ (143), ಮೈಸೂರು (138), ಹಾಸನ (133 ), ದಾವಣಗೆರೆ (132), ಉತ್ತರ ಕನ್ನಡ (117) ಹಾಗೂ ಮಂಡ್ಯ (101) ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

Facebook Comments

Sri Raghav

Admin