BREAKING : ರಾಜ್ಯದಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 2,798 ಮಂದಿಗೆ ಪಾಸಿಟಿವ್​, 70 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಶನಿವಾರ ಮತ್ತೆ ಕೊರೊನಾ ಸ್ಫೋಟಗೊಂಡಿದ್ದು, 2,798 ಹೊಸ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216ಕ್ಕೇರಿಕೆಯಾಗಿದೆ.

ಇಂದುಒಂದೇ ದಿನ 70 ಮಂದಿ ಸೋಂಕಿನಿಂದ ವನ್ನಪ್ಪಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 613ಕ್ಕೇರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1533 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2798 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಪ್ರವಾಸೋದ್ಯಮ ಸಚಿವ ಸಿಟಿ ರವಿಗೂ ಕೊರೊನಾ ವರದಿ ಪಾಸಿಟಿವ್​ ಬಂದಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 23 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 70 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶನಿವಾರ ಒಂದೇ ದಿನ 880 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ ದಾಖಲಾದ ಕೊರೋನಾ ಪ್ರಕರಣಗಳ ಸಂಖ್ಯೆ 33 ಸಾವಿರ ದಾಟಿ ಹೋಗಿದೆ. ಬೆಂಗಳೂರು ನಗರದಲ್ಲೇ ಹೆಚ್ಚಿನ ಕೊರೋನಾ  ಪ್ರಕರಣ​ಗಳು ಇವೆಯಾದರೂ ಬೇರೆ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಹರಡುತ್ತಿದೆ.

ನಿನ್ನೆ ಮೊದಲ ಬಾರಿಗೆ ಬೆಂಗಳೂರೇತರ ಜಿಲ್ಲೆಯೊಂದರಲ್ಲಿ ಒಂದೇ ದಿನ ನೂರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಬರೋಬ್ಬರಿ 139 ಮಂದಿಗೆ ಸೋಂಕು ಪತ್ತೆಯಾಗಿತ್ತು.

ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಸಾವಿರ ದಾಟಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12 ಸಾವಿರದ ಗಡಿಯತ್ತ ದಾವಿಸುತ್ತಿದೆ.

Facebook Comments

Sri Raghav

Admin