ಬ್ರೇಕಿಂಗ್ : ರಾಜ್ಯದಲ್ಲಿ ಇಂದು 2627 ಮಂದಿಗೆ ಪಾಸಿಟಿವ್, 71 ಸಾವು ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಇಂದು ಮತ್ತೆ 2627 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದು 71 ಜನರು ಬಲಿಯಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38843ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 693 ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1525 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2627 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶನಿವಾರ ಒಂದೇ ದಿನ 693 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಸತತ 4ನೇ ದಿನವೂ 2000ಕ್ಕಿಂತ ಅಧಿಕ ಕೊರೊನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಸತತ 2ನೇ ದಿನ 70ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಈವರೆಗೆ ದಾಖಲಾದ ಕೊರೋನಾ ಪ್ರಕರಣಗಳ ಸಂಖ್ಯೆ 38 ಸಾವಿರ ದಾಟಿ ಹೋಗಿದೆ. ಬೆಂಗಳೂರು ನಗರದಲ್ಲೇ ಹೆಚ್ಚಿನ ಕೊರೋನಾ ಪ್ರಕರಣಗಳು ಇವೆಯಾದರೂ ಬೇರೆ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಹರಡುತ್ತಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1525, ದಕ್ಷಿಣ ಕನ್ನಡ 196, ಧಾರವಾಡ 129, ಯಾದಗಿರಿ 120 ಜನರಿಗೆ ಸೋಂಕು ತಗುಲಿದೆ. ಕಲಬುರ್ಗಿ 79, ಬಳ್ಳಾರಿ 63, ಬೀದರ್ 62, ರಾಯಚೂರು 48, ಉಡುಪಿ 43, ಮೈಸೂರು, ಶಿವಮೊಗ್ಗ ತಲಾ 42, ಚಿಕ್ಕಬಳ್ಳಾಪುರ 39, ಹಾಸನ 31, ಕೊಪ್ಪಳ 27, ತುಮಕೂರು 26, ಕೋಲಾರ 24, ದಾವಣಗೆರೆ ಜಿಲ್ಲೆಯಲ್ಲಿ 20 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಬೆಂಗಳೂರು ಗ್ರಾಮಾಂತರ 19, ಕೊಡಗು 15, ಗದಗ 14, ಚಾಮರಾಜನಗರ 13, ಉತ್ತರಕನ್ನಡ, ಹಾವೇರಿ 12, ಚಿಕ್ಕಮಗಳೂರು 10, ಬಾಗಲಕೋಟೆ 7, ಮಂಡ್ಯ 4, ರಾಮನಗರ 3, ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ತಗುಲಿದೆ.

ಇಂದು ಕೂಡ ಬೆಂಗಳೂರಿನಲ್ಲಿ ಬರೋಬ್ಬರಿ 1525 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 18387 ಕ್ಕೆ ಏರಿಕೆಯಾಗಿದೆ. ಇಂದು 206 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು. ಇದುವರೆಗೆ 4045 ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 45 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 274 ಕ್ಕೆ ಏರಿಕೆಯಾಗಿದೆ.

Facebook Comments

Sri Raghav

Admin