ಕರ್ನಾಟಕದಲ್ಲಿಂದು ಕೊರೋನಾ ಮಾಹಾಸ್ಪೋಟ : 14738 ಮಂದಿಗೆ ಪಾಸಿಟಿವ್, 66 ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಮಹಾಸ್ಪೋಟವಾಗಿದ್ದು ಕಳೆದ 24 ಗಂಟೆಯಲ್ಲಿ 14738 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 66 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1109650 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 13112ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಬರೋಬ್ಬರಿ 10 ದಾಟಿದ್ದು 10497 ಜನರಿಗೆ ಕೊರೋನಾ ತಗುಲಿದ್ದು, 30 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 512521 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 4963 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 3591 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 999958 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 96561 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 555 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin