ಕರ್ನಾಟಕದಲ್ಲಿ ಕೊರೋನಾ ಸ್ಫೋಟ : ಒಂದೇ ದಿನ ದಾಖಲೆಯ 8818 ಕೇಸ್, 114 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟಗೊಂಡಿದ್ದು ತನ್ನ ಈ ಹಿಂದಿನ ದಾಖಲೆಗಲ್ಲನ್ನೇಲ್ಲ ಪುಡಿಗಟ್ಟಿ ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 8818 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 114ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 219926ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 3831ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 3495 ಜನರಿಗೆ ಕೊರೋನಾ ತಗುಲಿದ್ದು, 35 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 87680 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ 1395ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 6629 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 134811 ಜನ ಗುಣಮುಖರಾಗಿದ್ದಾರೆ. ಉಳಿದಂತೆ 81276 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 716 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 54806 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 1993760 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

Facebook Comments

Sri Raghav

Admin