ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 4,120 ಮಂದಿಗೆ ಪಾಸಿಟಿವ್, 91 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕಿಲ್ಲರ್ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 4,120 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 36 ಮಂದಿ ಸೇರಿದಂತೆ 91 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದು ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2156 ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 39,370 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 24,316 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಶೇ.31.1ಕ್ಕೆ ರಷ್ಟಿದ್ದು, ರಾಜ್ಯದಲ್ಲಿ ಮರಣ ಪ್ರಮಾಣ ಶೇ.2.8ರಷ್ಟು ಇದೆ.

Facebook Comments

Sri Raghav

Admin

One thought on “ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 4,120 ಮಂದಿಗೆ ಪಾಸಿಟಿವ್, 91 ಸಾವು..!

  • Pingback: URL

Comments are closed.