ರಾಜ್ಯದಲ್ಲಿ ಕೊರೋನಾ ರುದ್ರನರ್ತನ : ಇಂದು 8642 ಮಂದಿಗೆ ಪಾಸಿಟಿವ್,126 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಅಬ್ಬರ ಮುಂದುವರೆದಿದ್ದು 8642 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು ಅತಿ ಹೆಚ್ಚು ಅಂದರೆ 126 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 249590 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 4327ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2804 ಜನರಿಗೆ ಕೊರೋನಾ ತಗುಲಿದ್ದು, 56 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 96910 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 1588 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 7201 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 164150 ಜನ ಗುಣಮುಖರಾಗಿದ್ದಾರೆ. ಉಳಿದಂತೆ 81097 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 704 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 63085 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 2197259 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

# ಜಿಲ್ಲಾವಾರು ಇಂದು ಪತ್ತೆಯಾದ ಸೋಂಕಿತರ ಸಂಖ್ಯೆ ಈ ಕೆಳಕಂಡಂತಿದೆ :

Facebook Comments

Sri Raghav

Admin