ರಾಜ್ಯದಲ್ಲಿಂದು ಕೊರೋನಾ ರುದ್ರನರ್ತನ : ಹೊಸದಾಗಿ 8161 ಮಂದಿಗೆ ಪಾಸಿಟಿವ್, 148 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಅಕ್ಷರಶಃ ಅಬ್ಬರಿಸಿದ್ದು ಕಳೆದ 24 ಗಂಟೆಯಲ್ಲಿ 8161 ಜನರಲ್ಲಿ ಸೋಂಕು ಪತ್ತೆಯಾದರೆ, ಬರೋಬ್ಬರಿ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 291826 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 4958ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2294 ಜನರಿಗೆ ಕೊರೋನಾ ತಗುಲಿದ್ದು, 61 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 112087 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 1755 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 6814 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 204439 ಜನ ಗುಣಮುಖರಾಗಿದ್ದಾರೆ. ಉಳಿದಂತೆ 82410 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ751 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 59787 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 2513555 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

# ಜಿಲ್ಲಾವಾರು ಇಂದು ಪತ್ತೆಯಾದ ಸೋಂಕಿತರ ಸಂಖ್ಯೆ ಈ ಕೆಳಕಂಡಂತಿದೆ :

Facebook Comments

Sri Raghav

Admin