ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 8960 ಮಂದಿಗೆ ಪಾಸಿಟಿವ್, 136 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಅಬ್ಬರ ಮುಂದುವರೆದಿದ್ದು 8960 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 136 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 318752 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2721 ಜನರಿಗೆ ಕೊರೋನಾ ತಗುಲಿದ್ದು, 41 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 121449 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 1886 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 7464 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 227018 ಜನ ಗುಣಮುಖರಾಗಿದ್ದಾರೆ. ಉಳಿದಂತೆ 86347 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 754 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 64226 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 2713036 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

# ಜಿಲ್ಲಾವಾರು ಇಂದು ಪತ್ತೆಯಾದ ಸೋಂಕಿತರ ಸಂಖ್ಯೆ ಈ ಕೆಳಕಂಡಂತಿದೆ :

Facebook Comments

Sri Raghav

Admin