ರಾಜ್ಯದಲ್ಲಿ 2282 ಮಂದಿಗೆ ಕೊರೋನಾ ಪಾಸಿಟಿವ್, 17 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಗುರುವಾರ ಒಂದೇ ದಿನ ರಾಜ್ಯದಲ್ಲಿ 2282 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 31159ಕ್ಕೆ ಏರಿಕೆಯಾಗಿದೆ.

ಇದರಲ್ಲಿ ಬೆಂಗಳೂರಿನಲ್ಲೇ 1,373 ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 13,882ಕ್ಕೆ ಏರಿಕೆಯಾಗಿದೆ.

ಜೊತೆಗೆ, ರಾಜ್ಯದಲ್ಲಿ ಇಂದು ಕೊರೊನಾದಿಂದ 17 ಜನರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ.ಸುಧಾಕರ್​ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 487ಕ್ಕೇರಿಕೆಯಾಗಿದೆ. ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬುಧವಾರ ಒಂದೇ ದಿನ ಮಹಾಮಾರಿಗೆ 54 ಮಂದಿ ಉಸಿರು ಚೆಲ್ಲಿದ್ದರು.

ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ ಒಂದೇ ದಿನ 957 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಂದು 606 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

Facebook Comments

Sri Raghav

Admin