ಕೊರೋನಾ ಅಟ್ಟಹಾಸ : ವಿಶ್ವದಾದ್ಯಂತ 53,400 ಮಂದಿ ಸೋಂಕಿತರರು ಸೀರಿಯಸ್

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.1-ಡೆಡ್ಲಿ ಕೊರೊನಾ ವೈರಸ್ ಹಾವಳಿಯಿಂದ ವಿಶ್ವ ನಲುಗುತ್ತಿರುವಾಗಲೇ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡುಬಂದಿದೆ.  ವಿಶ್ವದ ಸುಮಾರು 250 ದೇಶಗಳಲ್ಲಿ ಕೋವಿಡ್-19 ವೈರಸ್‍ಗೆಈವರೆಗೆ 3.74 ಲಕ್ಷ ಮಂದಿ ಬಲಿಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 62.67 ಲಕ್ಷಕ್ಕೇರಿದೆ. ಅಲ್ಲದೇ ಇನ್ನೂ 53,400 ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.

ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾಗಿದೆ.  ವಿಶ್ವದಲ್ಲಿಈವರೆಗೆ 28,47,571 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ. ಕಳೆದ 24 ತಾಸುಗಳಲ್ಲಿ ವಿಶ್ವದಾದ್ಯಂತ 1.10 ಲಕ್ಷಕ್ಕೂ ಅಧಿಕ ಮಂದಿಗೆ (ಸೋಂಕು ತಗುಲಿದೆ.

ಕಳೆದ ಒಂದು ವಾರದಿಂದಲೂ ಜಗತ್ತಿನಾದ್ಯಂತ ಸರಾಸರಿ 1 ಲಕ್ಷ ಮಂದಿಗೆ ಸಾಂಕ್ರಾಮಿಕರೋಗ ಕಾಣಿಸಿಕೊಳ್ಳುತ್ತಿದೆ. ಅಲ್ಲದೇ ದಿನ ನಿತ್ಯ ಪಾಸಿಟಿವ್ ಕೇಸ್‍ಗಳು ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಜಗತ್ತಿನಾದ್ಯಂತ ಈವರೆಗೆ 3,73,961 ಮಂದಿ ಸಾವಿಗೀಡಾಗಿದ್ದು, 62,67,657ಸೋಂಕು ಪ್ರಕರಣಗಳು ವರದಿಯಾಗಿವೆ.

ಇಂದುರಾತ್ರಿವೇಳೆಗೆ ಮೃತರ ಸಂಖ್ಯೆ 3.75ಲಕ್ಷ ಮತ್ತು ಸೋಂಕಿತರ ಸಂಖ್ಯೆ64ಲಕ್ಷ ಮೀರುವ ಆತಂಕವಿದೆ. ಅಮೆರಿಕ, ಬ್ರೆಜಿಲ್, ರಷ್ಯಾ, ಸ್ಪೇನ್, ಮತ್ತುಇಂಗ್ಲೆಂಡ್ – ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದಟಾಪ್ ಫೈವ್ ದೇಶಗಳಾಗಿವೆ.

ಭಾರೀ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಲ್ಲಿ ಇಟಲಿ, ಭಾರತ, ಫ್ರಾನ್ಸ್, ಜರ್ಮನಿ, ಮತ್ತುಟರ್ಕಿದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವು ಪಟ್ಟಿಯಲ್ಲಿ ಈ ಹಿಂದೆ 9ನೇ ಸ್ಥಾನದಲ್ಲಿದ್ದಭಾರತಫ್ರಾನ್ಸ್ ಮತ್ತುಜರ್ಮನಿಯನ್ನು ಹಿಂದಿಕ್ಕೆ 7ನೇ ಸ್ಥಾನದಲ್ಲಿದೆ. ಭಾರತದಲ್ಲಿ ಸೋಂಕು ಮತ್ತು ಸಾವಿನ ಸಂಖ್ಯೆಇದೇ ವೇಗದಲ್ಲಿ ಮುಂದುವರಿದರೆಇಟಲಿಯನ್ನು ಹಿಂದೆ ಹಾಕಲಿದೆ.

ಏಷ್ಯಾಖಂಡದಲ್ಲಿಚೀನಾ, ದಕ್ಷಿಣಕೊರಿಯಾ, ಪಾಕಿಸ್ತಾನ ಸೇರಿದಂತೆ ಅನೇಕ ದೇಶಗಳಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿಏರಿಕೆಯಾಗಿದೆ. ಕೊರೊನಾ ವೈರಸ್‍ಕೇಂದ್ರ ಬಿಂದುಚೀನಾದ ವುಹಾನ್ ನಗರದಲ್ಲಿಯೂ ಹೊಸ ಪಾಸಿಟಿವ್ ಕೇಸ್‍ಗಳು ಕಂಡುಬರುತ್ತಿವೆ.

Facebook Comments