16 ದಿನಗಳಲ್ಲಿ 10 ಲಕ್ಷ ಮಂದಿಗೆ ಕೊರೋನಾ..! ಭಾರತದಲ್ಲಿ ಕಿಲ್ಲರ್ ವೈರಸ್ ಅಟ್ಟಹಾಸ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.21-ದೇಶದಲ್ಲಿ ಕಿಲ್ಲರ್ ಕೊರೊನಾ ವೈರಸ್ ಸೋಂಕಿನ ಆರ್ಭಟ ಗಂಡಾಂತರಕಾರಿಯಾಗಿಯೇ ಮುಂದುವರಿದ್ದು, ಕೇವಲ 16 ದಿನಗಳಲ್ಲೇ 10 ಲಕ್ಷ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ.

ಸಾಂಕ್ರಾಮಿಕ ರೋಗದ ಮಹಾಸೋಟದಲ್ಲಿ ಮತ್ತೆ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ನಿನ್ನೆಯಿಂದ ಇಂದು ಮುಂಜಾನೆವರೆಗೆ 69,000 ಮಂದಿಗೆ ಮತ್ತೆ ವೈರಸ್ ರೋಗ ತಗುಲಿದೆ. ಸತತ ನಾಲ್ಕು ದಿನಗಳಿಂದಲೂ ಸರಾಸರಿ ಇದೇ ಪ್ರಮಾಣದಲ್ಲಿ ಪಾಸಿಟಿವ್ ಕೇಸ್‍ಗಳು ದಾಖಲಾಗುತ್ತಿರುವುದು ದೇಶದ ಜನರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.

24 ತಾಸುಗಳ ಅವಯಲ್ಲಿ 69,239 ಪ್ರಕರಣಗಳು ಮತ್ತು 912 ಸಾವುಗಳು ಸಂಭವಿಸಿದೆ. ದೇಶದಲ್ಲೀಗ ಸೋಂಕಿತರ ಸಂಖ್ಯೆ 30,44 ಲಕ್ಷ ಹಾಗೂ ಸಾವಿನ ಸಂಖ್ಯೆ 56,700 ದಾಟಿರುವುದು ಆತಂಕದ ವಿದ್ಯಮಾನವಾಗಿದೆ.

ಕೋವಿಡ್ ಸಾಂಕ್ರಾಮಿಕ ರೋಗ ಮಹಾಸೋಟದ ಪ್ರಕೋಪ ಆಗಸ್ಟ್ ಮೂರು ಮತ್ತು ಕೊನೆಯ ವಾರ ಏರುಗತಿಯಲ್ಲೇ ಸಾಗಿದ್ದು (ಸೋಂಕು ಇಳಿಕೆಯ ಮೂರು ದಿನಗಳನ್ನು ಹೊರತುಪಡಿಸಿ) ಪಾಸಿಟಿವ್ ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.74.90ರಷ್ಟು ವೃದ್ದಿ ಕಂಡುಬಂದಿದ್ದು, ಈವರೆಗೆ ದೇಶದಲ್ಲಿ 3.52 ಕೋಟಿಗೂ ಹೆಚ್ಚು ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ 22.80 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದಾರೆ.

24 ತಾಸುಗಳಲ್ಲಿ 912 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 56,706ಕ್ಕೇರಿದೆ. ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 30,44,940 ದಾಟಿದೆ.

ದೇಶದಲ್ಲಿ ಈಗ 7,07,668 ಅಕ ಆಕ್ಟಿವ್ ಕೇಸ್‍ಗಳಿದ್ದು, 22,80,565ಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.74.90ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.86ರಷ್ಟು ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.  ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ 8,01,147 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 3,52,92,220 ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin