ರಾಮನಗರದಲ್ಲಿ 315 ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಜು.9-  ಜಿಲ್ಲೆಯಲ್ಲಿ ನಿನ್ನೆ 34 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದ, ಇದುವರೆಗೆ ಜಿಲ್ಲೆಯಲ್ಲಿ 315 ಪ್ರಕರಣಗಳು ದಾಖಲಾಗಿವೆ. ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.

ಮಾಗಡಿ 22, ಚನ್ನಪಟ್ಟಣ 5, ಕನಕಪುರ 5 ಮತ್ತು ರಾಮನಗರದಲ್ಲಿ 2 ಪ್ರಕರಣಗಳು ಪತ್ತೆಯಾಗಿದೆ. ಇವರನ್ನು ರಾಮನಗರದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.

27 ಜನರು ಕೋವಿಡ್ ಸೋಂಕಿನಿಂದ ನಿನ್ನೆ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 145 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಕನಕಪುರ 58, ಮಾಗಡಿ 29, ಚನ್ನಪಟ್ಟಣ 32 ಮತ್ತು ರಾಮನಗರದ 26 ಜನರು ಸೇರಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 315 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಕನಕಪುರ 72, ಮಾಗಡಿ 120, ಚನ್ನಪಟ್ಟಣ 53 ಮತ್ತು ರಾಮನಗರದ 70 ಪ್ರಕರಣಗಳು ಸೇರಿವೆ.

ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

# ಜಿಲ್ಲಾ ಆರೋಗ್ಯ ಇಲಾಖೆ ವರದಿ:
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರ ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 10833.

ಒಟ್ಟು 3796 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 312 ಜನರು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 3077ಗೆ ಇಳಿಕೆಯಾಗಿದೆ.

ಜ್ವರ ತಪಾಸಣಾ ಕೇಂದ್ರದಲ್ಲಿ 70 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 3245 ಮಂದಿ ತಪಾಸಣೆಗೆ ಮಾಡಿಸಿ ಕೊಂಡಿದ್ದಾರೆ. ಹೊಸದಾಗಿ 330 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

ಇದುವರೆಗೆ ಒಟ್ಟು 11151 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 8971 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. 330 ಬಾಕಿ ವರದಿ ಸೇರಿ ಒಟ್ಟು 1604 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.

Facebook Comments

Sri Raghav

Admin