ರಾಮನಗರದಲ್ಲಿ ಕೊರೋನಾ ಹೆಚ್ಚಳ : ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವಂತೆ ಹೆಚ್ಡಿಕೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಜು.1-ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಮನಗರದಲ್ಲಿನ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ನಗರದ ಬಿಜಿಎಸ್ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆ ಆಗಿ ಬಳಸಿಕೊಳ್ಳಿ, ಇದಕ್ಕೆ ಹಣಕಾಸಿನ ಕೊರತೆಯಿದ್ದರೆ ಶಾಸಕರ ನಿಧಿಯ ಹಣವನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕ್ವಾರಂಟೈನ್ ಗೆ ಸ್ಥಳದ ಅಭಾವ ಇರುವುದರಿಂದ ವಂದಾರಗುಪ್ಪೆ ಬಳಿಯ ಪೋಲಿಸ್ ತರಬೇತಿ ಕೇಂದ್ರ ಬಳಸಿಕೊಳ್ಳುವ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ.

ಗೃಹ ಸಚಿವರು ಕೂಡ ಈ ವಿಷಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Facebook Comments

Sri Raghav

Admin