ಭಾರತದಲ್ಲಿ ಕೊರೋನಾ ಸಾರ್ವಕಾಲಿಕ ದಾಖಲೆ : ಒಂದೇ ದಿನ 70,000 ಹೊಸ ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.20- ದೇಶದಲ್ಲಿ ಕಿಲ್ಲರ್ ಕೊರೊನಾ ವೈರಸ್ ಸೋಂಕಿನ ಮಹಾಸೋಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಒಂದೇ ದಿನ 70,000 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಜನರು ಮತ್ತಷ್ಟು ಭಯಭೀತರಾಗಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗ ಮಹಾಸೋಟದ ಪ್ರಕೋಪ ಅಕ್ಟೋಬರ್ ತಿಂಗಳಿನಲ್ಲಿ ಏರುಗತಿಯಲ್ಲೇ ಸಾಗಿದ್ದು (ಸೋಂಕು ಇಳಿಕೆಯ ಮೂರು ದಿನಗಳನ್ನು ಹೊರತುಪಡಿಸಿ) ಪಾಸಿಟಿವ್ ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

24 ತಾಸುಗಳ ಅವಯಲ್ಲಿ ಸುಮಾರು 70,000 ಪ್ರಕರಣಗಳು ಮತ್ತು 977 ಸಾವುಗಳು ಸಂಭವಿಸಿದೆ. ದೇಶದಲ್ಲೀಗ ಸೋಂಕಿತರ ಸಂಖ್ಯೆ 28.36 ಲಕ್ಷ ದಾಟಿರುವುದು ಹಾಗೂ ಸಾವಿನ ಸಂಖ್ಯೆ 54,000 ಸನಿಹದಲ್ಲಿರುವುದು ಆತಂಕದ ವಿದ್ಯಮಾನವಾಗಿದೆ.

ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.73.91ರಷ್ಟು ವೃದ್ದಿ ಕಂಡುಬಂದಿದ್ದು, ಈವರೆಗೆ ದೇಶದಲ್ಲಿ 3.26 ಕೋಟಿಗೂ ಹೆಚ್ಚು ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ 20.96 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.73.91ರಷ್ಟು ಏರಿಕೆ ಕಂಡುಬಂದಿದೆ.

24 ತಾಸುಗಳಲ್ಲಿ ಸುಮಾರು 977 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 53,886ಕ್ಕೇರಿದೆ. ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 28,36,925 ದಾಟಿದೆ.

ದೇಶದಲ್ಲಿ ಈಗ 6,86,395ಕ್ಕೂ ಅಕ ಆಕ್ಟಿವ್ ಕೇಸ್‍ಗಳಿದ್ದು, 26,96,664ಕ್ಕೂ ಅಕ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.73.91ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.91ರಷ್ಟು ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ ದಾಖಲೆ ಸಂಖ್ಯೆಯ ಅಂದರೆ 9,18,470 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 3.26 ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin