ಜಗತ್ತಿನಾದ್ಯಂತ ಕೊರೋನಾಗೆ 3.08 ಲಕ್ಷ ಮಂದಿ ಬಲಿ, 45,000 ರೋಗಿಗಳ ಸ್ಥಿತಿ ಗಂಭೀರ..!

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ಮ್ಯಾಡ್ರಿಡ್/ಮಾಸ್ಕೋ, ಮೇ 16-ಕಿಲ್ಲರ್ ಕೊರೊನಾ ಇಡೀ ಜಗತ್ತಿಗೆ ಕಂಟಕವಾಗಿ ಪರಿಣಮಿಸಿದೆ. ವೈರಸ್ ವಿಷವ್ಯೂಹದಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ಪ್ರಪಂಚದಾದ್ಯಂತ ಈವರೆಗೆ 3.08,655 ಲಕ್ಷಕ್ಕೂ ಹೆಚ್ಚು ಜನರ ಸಾವು ಮತ್ತು 46,28,879 ಸೋಂಕು ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗ ಪೀಡಿತರಲ್ಲಿ 45,000ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಬೀರವಾಗಿರುವ ಆತಂಕಕಾರಿಯಾಗಿದೆ.

ವಿಶ್ವವ್ಯಾಪಿ ಸಾವಿನ ಸಂಖ್ಯೆ ಆತಂಕವಿರುವಾಗಲೇ, ಸುಮಾರು 17,60,629 ಅಧಿಕ ಮಂದಿ ಸಾಂಕ್ರಾಮಿಕ ರೋಗಗಳು ಚೇತರಿಸಿಕೊಂಡು ಗುಣಮುಖರಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಇಡೀ ಜಗತ್ತನಾದ್ಯಂತ ಅಪಾರ ಸಾವು-ನೋವು ಮತ್ತು ಭಾರೀ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿರುವ ವಿನಾಶಕಾರಿ ಕೊರೊನಾ ವೈರಸ್ ದಾಳಿಯಿಂದ ಎಲ್ಲ ರಾಷ್ಟ್ರಗಳು ಕಂಗೆಟ್ಟು ಅಸಹಾಯಕವಾಗಿವೆ..

ಇದೇ ಪರಿಸ್ಥಿತಿ ಮುಂದುವರಿದಲ್ಲಿ ನಾಳೆ ವೇಳೆಗೆ ಸಾಂಪ್ರಾಮಿಕ ರೋಗ ಪೀಡಿತರ ಸಂಖ್ಯೆ 50 ಲಕ್ಷ ದಾಟುವ ಆತಂಕವಿದೆ. ಸೋಂಕಿತರಲ್ಲಿ ಈಗಾಗಲೇ 45,000ಕ್ಕೂ ಹೆಚ್ಚು ಮಂದಿ ಶೋಚನೀಯ ಸ್ಥಿತಿಯಲ್ಲಿದ್ದು, ಸಆವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಅಮೆರಿಕ, ಸ್ಪೇನ್, ಇಂಗ್ಲೆಂಡ್, ರಷ್ಯಾ ಮತ್ತು ಇಟಲಿ – ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ. ಭಾರೀ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಲ್ಲಿ ಬ್ರೆಜಿಲ್, ಫ್ರಾನ್ಸ್, ಜರ್ಮನಿ, ಟರ್ಕಿ ಮತ್ತು ಇರಾನ್ ದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವು ಪಟ್ಟಿಯಲ್ಲಿ ಭಾರತ 11ನೇ ಸ್ಥಾನದಲ್ಲಿದೆ.

ಜಗತ್ತಿನ 250ಕ್ಕೂ ಹೆಚ್ಚು ದೇಶಗಳು ಸತತ ಐದು ತಿಂಗಳುಗಳಿಂದ ಕೊರೊನಾ ನಿಗ್ರಹಕ್ಕಾಗಿ ನಿರಂತರ ಹೋರಾಟ ಮುಂದುವರಿಸಿದ್ದರೂ ಹೆಮ್ಮಾರಿ ನಿಯಂತ್ರಣ ಸಾಧ್ಯವಾಗದಿರುವುದು ಭಾರೀ ಕಳವಳಕಾರಿಯಾಗಿದೆ. ಚೀನಾ, ದಕ್ಷಿಣ ಕೊರಿಯಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೊನಾ ವೈರಸ್ ದಾಳಿಯ ಎರಡನೇ ಅಲೆ ಎದ್ದಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ.

Facebook Comments

Sri Raghav

Admin