ವಿಧಾನಸೌಧದ ನೌಕರ ಕೊರೊನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.30- ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ.  ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ(ಡಿಪಿಎಆರ್) ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷ ನೌಕರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ನೌಕರನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಜೆ ತೆಗೆದುಕೊಳ್ಳಲು ಸೂಚನೆ ಕೊಡಲಾಗಿತ್ತು. ಅದರಂತೆ ಆತ ಮೈಸೂರಿಗೆ ತೆರಳಿ ಕೋವಿಡ್-19 ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಇದೀಗ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವುದರಿಂದ ಆತನ ಟ್ರಾವೆಲ್ ಹಿಸ್ಟರಿ(ಪ್ರವಾಸದ ಹಿನ್ನೆಲೆ)ಯನ್ನು ಪತ್ತೆಹಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ.

Facebook Comments