ಭಾರತದಲ್ಲಿ 40,000 ಗಡಿ ದಾಟಿದ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ 20 ಲಕ್ಷ ಸನಿಹಕ್ಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.5-ಭಾರತದಲ್ಲಿ ಕಳೆದ ಐದು ತಿಂಗಳುಗಳಿಂದ ಆರ್ಭಟಿಸುತ್ತಲೇ ಇರುವ ಕಿಲ್ಲರ್ ಕೊರೊನಾ ವೈರಸ್ ಪ್ರಕೋಪ ಆಗಸ್ಟ್‍ನಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷ ಸನಿಹ ಮತ್ತು ಮೃತರ ಸಂಖ್ಯೆ 40,000 ದಾಟಿರುವುದು ಆತಂಕಕಾರಿ ಸಂಗತಿಯಾಗಿದೆ.

24 ತಾಸುಗಳಲ್ಲಿ ಮತ್ತೆ 52,000ಕ್ಕೂ ಹೆಚ್ಚು ಹೊಸ ಸೋಂಕು ಮತ್ತು 850ಕ್ಕೂ ಅಧಿಕ ಸಾವಿನ ಪ್ರಕರಣಗಳು ವರದಿಯಾಗಿದೆ. ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದರ ನಡುವೆಯೂ 12.82 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಮೃತ್ಯದವಡೆಯಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ..67.19ರಷ್ಟು ಏರಿಕೆ ಕಂಡುಬಂದಿದೆ.

ನಿನ್ನೆಯಿಂದ ಇಂದು ಬೆಳಗ್ಗೆವರೆಗೆ 52,509 ಜನರಿಗೆ ಸಾಂಕ್ರಾಮಿಕ ರೋಗ ತಗುಲಿದೆ. ಸತತ ಏಳು ದಿನಗಳಿಂದ 50,000+ ಹಾಗೂ 14 ದಿವಸಗಳಿಂದಲೂ ನಿರಂತರವಾಗಿ ದೇಶದಲ್ಲಿ ಸೋಂಕಿತರ ಸಂಖ್ಯೆ 45,000+ ಪ್ರಮಾಣದಲ್ಲೇ ಮುಂದುವರಿದಿರುವುದು ಚಿಂತಾಜನಕ ಸಂಗತಿಯಾಗಿದೆ.

24 ತಾಸುಗಳಲ್ಲಿ 857 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 39,795ಕ್ಕೇರಿದೆ. ಇಂದು ಮಧ್ಯಾಹ್ನದ ಮಾಹಿತಿ ಪ್ರಕಾರ ಸತ್ತವರ ಸಂಖ್ಯೆ 40,000 ದಾಟಿದೆ.

ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 19,08,254 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 20 ಲಕ್ಷ ಮತ್ತು ಮೃತರ ಸಂಖ್ಯೆ 40,300 ದಾಟಲಿದೆ.

ದೇಶದಲ್ಲಿ ಈಗ 5,86,244 ಆಕ್ಟಿವ್ ಕೇಸ್‍ಗಳಿದ್ದು, 12,82,215 ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.67.19 ಮತ್ತು ಸಾವಿನ ಪ್ರಮಾಣ ಶೇ.2.09ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ನಿನ್ನೆವರೆಗೆ 2,14,84,402 ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಸೋಂಕು ಪರೀಕ್ಷೆ ಸಾಮಥ್ರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ನಿನ್ನೆ ಒಂದೇ ದಿನ 6,19,652 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 857 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 40,000ಕ್ಕೇರಿದೆ.  ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇವೆÉ.

Facebook Comments

Sri Raghav

Admin