ಹಾಸನ ಜಿಲ್ಲೆಯಲ್ಲಿ 715 ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,;- ಜಿಲ್ಲೆಯಲ್ಲಿ ಇಂದು ಹೊಸದಾಗಿ 4 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 715 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.

ಇದುವರೆಗೆ 472 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 221 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 22 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು.

ಇಂದು ಮೃತಪಟ್ಟ 48 ವರ್ಷದ ವ್ಯಕ್ತಿ ಹಾಸನ ತಾಲ್ಲೂಕಿಗೆ ಸೇರಿದವರಾಗಿದ್ದು, 2 ವರ್ಷಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಗೆ ತುರ್ತು ಚಿಕಿತ್ಸೆ ಪಡೆಯುತ್ತಿದ್ದರು.

ಉಸಿರಾಟದ ತೋಂದರೆಯಿಂದ ಜು.10 ರಂದು ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾನುಸಾರ ಅವರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಡಾ|| ಸತೀಶ್ ಮಾಹಿತಿ ನೀಡಿದರು.

ಹೊಸದಾಗಿ ಇಂದು ಪತ್ತೆಯಾದ 4 ಪ್ರಕರಣಗಳಲ್ಲಿ ಒಬ್ಬರು ಚನ್ನರಾಯಪಟ್ಟಣ ತಾಲ್ಲೂಕಿನವರು, 3 ಜನ ಹಾಸನ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಕೋವಿಡ್-19 ಉಲ್ಬಣವಾಗುತ್ತಿರುವ ಹನ್ನಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ|| ಸತೀಶ್ ಹೇಳಿದರು.

Facebook Comments

Sri Raghav

Admin