ಭಾರತದಲ್ಲಿ ಒಂದೇ ದಿನ 64,553 ಮಂದಿಗೆ ಕೊರೋನಾ ಪಾಸಿಟಿವ್, 1,007 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.14-ದೇಶದಲ್ಲಿ ಡೆಡ್ಲಿ ಕೊರೊನಾ ಸೋಂಕಿನ ಮಹಾಸೋಟ ಮುಂದುವರಿದಿದೆ. 196 ದಿನಗಳ ಹಿಂದೆ ದೇಶದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿತ್ತು. ಆದರೆ ಇಂದು ಪಾಸಿಟಿವ್ ಕೇಸ್ 25 ಲಕ್ಷ ಸನಿಹದಲ್ಲಿರುವುದು ಗಂಡಾಂತರಕಾರಿ ಸಂಗತಿಯಾಗಿದೆ.

ಒಂದೇ ದಿನ 64,553 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಮೊನ್ನೆ ದೇಶದಲ್ಲಿ ಹೊಸ ದಾಖಲೆ ಸಂಖ್ಯೆಯ 67,000 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿತು.

ನಿನ್ನೆಯಿಂದ ಇಂದು ಬೆಳಗ್ಗೆವರೆಗೆ ಮತ್ತೆ ವೈರಸ್ ಸೋಂಕು ಮತ್ತು ಸಾವಿನ ಪ್ರಮಾಣ ಆತಂಕಕಾರಿ ಮಟ್ಟದಲ್ಲೇ ಮುಂದುವರಿದಿದೆ. ನಿನ್ನೆ 24 ತಾಸುಗಳ ಅವಯಲ್ಲಿ 64,500ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಯಲ್ಲಿ 1,007 ರೋಗಿಗಳು ಮೃತಪಟ್ಟಿದ್ದಾರೆ.

ಅಗಸ್ಟ್ ಮೂರು ಮತ್ತು ನಾಲ್ಕನೇ ವಾರದಲ್ಲಿ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ಹೆಚ್ಚಾಗಲಿದೆ ಎಂದು ಈಗಾಗಲೇ ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದು, ಅದಕ್ಕೆ ಮುನ್ಸೂಚನೆಯಂತೆ ಹೆಮ್ಮಾರಿ ಅಬ್ಬರಿಸಿ ಬೊಬ್ಬರಿಯುತ್ತಿದೆ.

ದೇಶದಲ್ಲಿ ಈಗ ಸೋಂಕಿತರ ಸಂಖ್ಯೆ 25 ಲಕ್ಷ ಸನಿಹದಲ್ಲಿರುವುದು ಮತ್ತು ಮೃತರ ಸಂಖ್ಯೆ 48,000 ದಾಟಿರುವುದು ಆತಂಕಕಾರಿ ಸಂಗತಿಯಾಗಿದೆ.. ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದರ ನಡುವೆಯೂ 17.51 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿ ಹಿಡಿತದಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.71.17ರಷ್ಟು ಏರಿಕೆ ಕಂಡುಬಂದಿದೆ. 24 ತಾಸುಗಳಲ್ಲಿ 1,007 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 48,040ಕ್ಕೇರಿದೆ.

ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 24,61,190 ದಾಟಿದೆ.
ದೇಶದಲ್ಲಿ ಈಗ 6,60 ಲಕ್ಷಕ್ಕೂ ಅಕ ಆಕ್ಟಿವ್ ಕೇಸ್‍ಗಳಿದ್ದು, 17,51,555 ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ.

ಚೇತರಿಕೆ ಪ್ರಮಾಣ ಶೇ.71.17ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.96ರಷ್ಟು ಇಳಿದಿದೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.

ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಅಂದರೆ 8,48,728 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 2.7 ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin