24 ಗಂಟೆಯಲ್ಲಿ 64,399 ಪಾಸಿಟಿವ್, 861 ಸಾವು..! ಭಾರತದಲ್ಲಿ ಅತಿರೇಕಕ್ಕೇರಿದ ಕೊರೋನಾ ಅಟ್ಟಹಾಸ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.9-ಭಾರತದಲ್ಲಿ ಕಿಲ್ಲರ್ ಕೊರೊನಾ ಹೆಮ್ಮಾರಿ ರೌದ್ರಾವತಾರ ಮತ್ತಷ್ಟು ತೀವ್ರವಾಗಿದೆ. ದೇಶಕ್ಕೆ ಆಗಸ್ಟ್ ತಿಂಗಳು ಗಂಡಾಂತರಕಾರಿಯಾಗಿ ಪರಿಣಮಿಸಿದ್ದು, ಕಿಲ್ಲರ್ ಕೊರೊನಾ ವೈರಸ್ ರೋಗ ಉಲ್ಬಣದ ಮಹಾ ಸೋಟ ಮರುಕಳಿಸುತ್ತಲೇ ಇದೆ.

ಸಾಂಕ್ರಾಮಿಕ ರೋಗದ ಹಿಂದಿನ ದಾಖಲೆಗಳೆಲ್ಲವನ್ನೂ ಕೋವಿಡ್-19 ವೈರಸ್ ಛಿಧ್ರ ಮಾಡಿದ್ದು, 24 ತಾಸುಗಳ ಅವಯಲ್ಲಿ 64,399 ಸೋಂಕು ಪ್ರಕರಣಗಳು ದಾಖಲಾಗಿವೆ. 64,000+ ಪಾಸಿಟಿವ್ ಪ್ರಕರಣ ಇದೇ ಮೊದಲ ಬಾರಿ ವರದಿಯಾಗಿರುವುದು ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 22 ಲಕ್ಷ ಮತ್ತು ಮೃತರ ಸಂಖ್ಯೆ 44,000 ಸನಿಹದಲ್ಲಿರುವುದು ಆತಂಕಕಾರಿ ಸಂಗತಿಯಾಗಿದೆ..
24 ತಾಸುಗಳಲ್ಲಿ 861 ಸಾವಿನ ಪ್ರಕರಣಗಳು ವರದಿಯಾಗಿದೆ. ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದರ ನಡುವೆಯೂ 14.80 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಸಾವಿನ ಕುಣಿಕೆಯಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.68.78ರಷ್ಟು ಏರಿಕೆ ಕಂಡುಬಂದಿದೆ. ನಿನ್ನೆಯಿಂದ ಇಂದು ಬೆಳಗ್ಗೆವರೆಗೆ 64,399 ಜನರಿಗೆ ಸಾಂಕ್ರಾಮಿಕ ರೋಗ ತಗುಲಿದೆ. ದೇಶದಲ್ಲಿ ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 60,000+ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ಇದು ಸತತ ಮೂರನೇ ದಿನ.

ಸತತ 11 ದಿನಗಳಿಂದ 50,000+ ಹಾಗೂ 18 ದಿವಸಗಳಿಂದಲೂ ನಿರಂತರವಾಗಿ ದೇಶದಲ್ಲಿ ಸೋಂಕಿತರ ಸಂಖ್ಯೆ 45,000+ ಪ್ರಮಾಣದಲ್ಲೇ ಮುಂದುವರಿದಿರುವುದು ಚಿಂತಾಜನಕ ಸಂಗತಿಯಾಗಿದೆ. 24 ತಾಸುಗಳಲ್ಲಿ 861 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 43,379ಕ್ಕೇರಿದೆ..

ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 21,53,010 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 22 ಲಕ್ಷ ಮತ್ತು ಮೃತರ ಸಂಖ್ಯೆ 44,000 ದಾಟಲಿದೆ.ದೇಶದಲ್ಲಿ ಈಗ 6,28,747 ಆಕ್ಟಿವ್ ಕೇಸ್‍ಗಳಿದ್ದು, 14,80,884 ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ.

ಚೇತರಿಕೆ ಪ್ರಮಾಣ ಶೇ.68.78 ಮತ್ತು ಸಾವಿನ ಪ್ರಮಾಣ ಶೇ.2.01ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ಅಕ ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇವೆ.

ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಅಂದರೆ 7,19,365 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 2,41,06,535 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಸ್ಯಾಂಪಲ್ ಪರೀಕ್ಷಾ ಸಾಮಥ್ರ್ಯವನ್ನು ಹೆಚ್ಚಿಸಲಾಗಿದ್ದು, ಪ್ರತಿ ನಿಮಿಷಕ್ಕೆ 500 ಮಾದರಿಗಳು ಮತ್ತು ಒಂದು ದಿನಕ್ಕೆ ಸರಾಸರಿ 5 ಲಕ್ಷ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಐಸಿಎಂಆರ್ ವಿಜÁ್ಞನಿ ಲೋಕೇಶ್ ಶರ್ಮ ತಿಳಿಸಿದ್ದಾರೆ.

Facebook Comments

Sri Raghav

Admin