ಭಾರತದಲ್ಲಿ ಕೊರೋನಾರ್ಭಟ : 24 ಗಂಟೆಯಲ್ಲಿ 69,000 ಹೊಸ ಕೇಸ್, 983 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.21-ದೇಶದಲ್ಲಿ ಕಿಲ್ಲರ್ ಕೊರೊನಾ ವೈರಸ್ ಸೋಂಕಿನಆರ್ಭಟ ಏರುಗತಿಯಲ್ಲಿಯೇ ಮುಂದುವರಿದಿದೆ. ಸಾಂಕ್ರಾಮಿಕ ರೋಗದ ಮಹಾಸೋಟದಲ್ಲಿ ಮತ್ತೆ ಆತಂಕಕಾರಿ ಹೆಚ್ಚಳ ಕಂಡುಬಂದಿದೆ.

ಮೊನ್ನೆ ಸೋಂಕು ಪ್ರಮಾಣದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿ. ಒಂದೇ ದಿನ 70,000 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿತ್ತು. ನಿನ್ನೆ ಸುಮಾರು 69,000 ಮಂದಿಗೆ ಮತ್ತೆ ವೈರಸ್ ರೋಗ ತಗುಲಿದ್ದು, ಜನರು ಮತ್ತಷ್ಟು ಭಯಭೀತರಾಗಿದ್ದಾರೆ. 24 ತಾಸುಗಳ ಅವಯಲ್ಲಿ 68,898 ಪ್ರಕರಣಗಳು ಮತ್ತು 983 ಸಾವುಗಳು ಸಂಭವಿಸಿದೆ.

ಇಂದು ಬೆಳಗ್ಗಿನ ಮಾಹಿತಿ ಪ್ರಕಾರ ಸೋಂಕಿತರ ಸಂಖ್ಯೆ 69,000 ಹಾಗೂ ಮೃತರ ಪ್ರಮಾಣ 1,000 ದಾಟಿದೆ. ದೇಶದಲ್ಲೀಗ ಸೋಂಕಿತರ ಸಂಖ್ಯೆ30 ಲಕ್ಷ ಹಾಗೂ ಸಾವಿನ ಸಂಖ್ಯೆ55,000 ಸನಿಹದಲ್ಲಿರುವುದು ಆತಂಕದ ವಿದ್ಯಮಾನವಾಗಿದೆ.

ಕೋವಿಡ್ ಸಾಂಕ್ರಾಮಿಕರೋಗ ಮಹಾಸೋಟದ ಪ್ರಕೋಪ ಆಗಸ್ಟ್‍ನಲ್ಲಿ ಏರುಗತಿಯಲ್ಲೇ ಸಾಗಿದ್ದು (ಸೋಂಕು ಇಳಿಕೆಯ ಮೂರು ದಿನಗಳನ್ನು ಹೊರತು ಪಡಿಸಿ) ಪಾಸಿಟಿವ್ ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.74ರಷ್ಟು ವೃದ್ದಿ ಕಂಡು ಬಂದಿದ್ದು, ಈವರೆಗೆ ದೇಶದಲ್ಲಿ 3.34ಕೋಟಿಗೂ ಹೆಚ್ಚುಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ 21.58ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿ ಹಿಡಿತದಿಂದ ಪಾರಾಗಿದ್ದಾರೆ.

24 ತಾಸುಗಳಲ್ಲಿ ಸುಮಾರು 983ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ54,849ಕ್ಕೇರಿದೆ. ಈವರೆಗೆ ಭಾರತದಲ್ಲಿ ರೋಗ ಪೀಡಿತರ ಪ್ರಮಾಣ 29,05,833 ದಾಟಿದೆ. ದೇಶದಲ್ಲಿ ಈಗ 6,92,028 ಅಕ ಆಕ್ಟಿವ್ ಕೇಸ್‍ಗಳಿದ್ದು, 21,58,945ಕ್ಕೂ ಅಕ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.74ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.89ರಷ್ಟು ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆಒಂದೇ ದಿನ 8,05,985ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ3,34,67,215 ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin