ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 68 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೋನಾ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.26- ಕೊರೊನಾ ಮಹಾಮಾರಿ ದೇಶದಲ್ಲಿ ಮತ್ತೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 68 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಸುಮಾರು 1,059ಕ್ಕೂ ಹೆಚ್ಚು ಮಂದಿ ಕೋವಿಡ್‍ನಿಂದ ಗುಣಮುಖರಾಗದೆ ಕೊನೆಯುಸಿರೆಳೆದಿದ್ದಾರೆ.

ಒಟ್ಟಾರೆ ಈವರೆಗೆ ಕೋವಿಡ್ ಪೀಡಿತರ ಸಂಖ್ಯೆ 32,34,474ಕ್ಕೆ ಏರಿಕೆಯಾಗಿದ್ದರೆ, 59,449 ಮಂದಿ ಜೀವ ಕಳೆದುಕೊಂಡಿದ್ದಾರೆ.
ಇದರ ನಡುವೆ ಸುಮಾರು 24,67,758 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ವಿಶೇಷವೆಂದರೆ ಚೇತರಿಕೆ ಪ್ರಮಾಣವು ಕೂಡ ಹೆಚ್ಚಳವಾಗಿದ್ದು, ಶೇ.76.29ಕ್ಕೆ ಮುಟ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮತ್ತೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದು, ನಂತರದ ಸ್ಥಾನದಲ್ಲಿ ದಕ್ಷಿಣ ಭಾರತದ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕ ಸ್ಥಾನ ಪಡೆದಿದೆ.

Facebook Comments

Sri Raghav

Admin