11 ದಿನಗಳಲ್ಲಿ 10 ಲಕ್ಷ ಮಂದಿ ಚೇತರಿಕೆ, 24 ಗಂಟೆಯಲ್ಲಿ 82,170 ಪಾಸಿಟಿವ್ ಕೇಸ್, 1039 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಸೆ.28- ಕಿಲ್ಲರ್ ಕೋವಿಡ್-19 ವೈರಸ್ ಹಾವಳಿಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಇನ್ನೊಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ಧಿಯಾಗಿದ್ದು, ಈವರೆಗೆ ಗುಣಮುಖರಾದ ಸೋಂಕಿತರ ಸಂಖ್ಯೆ 50 ಲಕ್ಷ ದಾಟಿದೆ. ಕೇವಲ 11 ದಿನಗಳಲ್ಲಿ 10 ಲಕ್ಷ ಮಂದಿ ಸೋಂಕು ರೋಗದಿಂದ ಚೇತರಿಸಿಕೊಂಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 60 ಲಕ್ಷ ಮೀರಿದ್ದು, ಈವರೆಗೆ 50 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಕೋವಿಡ್-18 ವೈರಾಣುವಿನ ಏರಿಳಿತದ ನಡುವೆ ನಿನ್ನೆ ಹೊಸ ಕೇಸ್‍ಗಳು ಕಡಿಮೆಯಾಗಿವೆ.

ಒಂದೇ ದಿನ ಮತ್ತೆ 82,170 (ಮೊನ್ನೆ 88,600) ಮಂದಿಗೆ ಸೋಂಕು ತಗಲಿದ್ದು, ಒಟ್ಟು ರೋಗಿಗಳ ಸಂಖ್ಯೆ 61 ಲಕ್ಷ ಸನಿಹದಲ್ಲಿದೆ. ಏಳು ದಿನಗಳ ಇಳಿಕೆ ನಂತರ ಮೊನ್ನೆ ಹೊಸ ಪ್ರಕರಣದಲ್ಲಿ ತುಸು ಏರಿಕೆಯಾಗಿತ್ತು. ಇಂದು ಕೊರೊನಾ ಪ್ರಕೋಪ ಕೊಂಚ ತಗ್ಗಿದೆ.

ಇದೇ ವೇಳೆ ಸಾವಿನ ಪ್ರಮಾಣದಲ್ಲಿಯೂ ಅಲ್ಪ ಇಳಿಕೆ ವರದಿಯಾಗಿದೆ. ಒಂದೇ ದಿನ 1,039 (ಮೊನ್ನೆ 1,124) ರೋಗಿಗಳನ್ನು ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಸತತ 24ನೇ ದಿನ 1,000ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಇದರೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ 95,550 ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನಿನ್ನೆ 82,170 ಜನರಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ರೋಗಿಗಳ ಸಂಖ್ಯೆ 60,74,702ಕ್ಕೇರಿದ್ದು, ಇಂದು ರಾತ್ರಿ ವೇಳೆಗೆ 61 ಲಕ್ಷ ದಾಟಲಿದೆ.  ಆ.7ರಂದು 20 ಲಕ್ಷ ಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆ.5ರಂದು 40 ಲಕ್ಷ ದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.16ರಂದು 50 ಲಕ್ಷ ದಾಟಿದೆ. ಸೆ.27ರಂದು 60 ಲಕ್ಷ ಮೀರಿದೆ.

ಇದರ ನಡುವೆಯೂ ನಿನ್ನೆ ದೇಶಾದ್ಯಂತ 74,893 ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣದಲ್ಲಿ ಶೇ.82.58ರಷ್ಟು ವೃದ್ಧಿ ಕಂಡುಬಂದಿದೆ. ಕಳೆದ 11 ದಿನಗಳ ಅವಯಲ್ಲಿ 10 ಲಕ್ಷಕ್ಕೂ ಅಕ ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ ಸುಮಾರು 7.20 ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ಧಿ ಕಂಡುಬಂದಿದ್ದು, 9.62 ಲಕ್ಷ ಸಕ್ರಿಯ ಕೇಸ್‍ಗಳೊಂದಿಗೆ ಪಾಸಿಟಿವ್ ಪ್ರಕರಣಗಳಲ್ಲಿ ಏರಿಳಿತ ಮುಂದುವರಿದಿದೆ. ಏತನ್ಮಧ್ಯೆ, 50.16 ಲಕ್ಷ ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದಾರೆ.

ದೇಶದಲ್ಲಿ ಈಗ 9,62,640 ಆಕ್ಟಿವ್ ಕೇಸ್‍ಗಳಿವೆ. 50,16,520 ಮಂದಿ ಚೇತರಿಸಿಕೊಂಡಿದ್ದು, ಗುಣಮುಖ ಪ್ರಕರಣ ಶೇ.82.58ಕ್ಕೇರಿದ್ದು, ಮರಣ ಪ್ರಮಾಣ ಶೇ.1.57ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳಿಗೆ ಹೋಲಿಸಿದಲ್ಲಿ, ರಿಕವರಿ ರೇಟ್‍ನಲ್ಲಿ ನಾಲ್ಕು ಪಟ್ಟುಗಳಿಗಿಂತಲೂ ಅಕ ಹೆಚ್ಚಳ ಕಂಡುಬಂದಿರುವುದು ಸಮಾಧಾನಕರ ಸಂಗತಿ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಮಹಾರಾಷ್ಟ್ರ ರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.

ದೇಶಾದ್ಯಂತ ನಿನ್ನೆ ಒಂದೇ ದಿನ 9.09 ಲಕ್ಷಕ್ಕೂ ಹೆಚ್ಚು ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 7,20 ಕೋಟಿಗೂ ಅಕ ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin