ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ,ಅ.26-ದೇಶಾದ್ಯಂತ ಮಾರಕ ಕೊರೊನಾ ವೈರಸ್‍ನ ಹಾವಳಿ ಕ್ರಮೇಣ ತಗ್ಗುತ್ತಿದ್ದು, ದಿನನಿತ್ಯದ ಸೋಂಕು, ಸಕ್ರಿಯ ಮತ್ತು ಸಾವು ಪ್ರಕರಣಗಳು ದಿನೇ ದಿನೇ ಕ್ಷೀಣಿಸುತ್ತಿರುವುದು ಭಾರತೀಯರಲ್ಲಿ ಸಮಾಧಾನ ಮೂಡಿಸಿದೆ.

ಹೆಮ್ಮಾರಿಯ ಆರ್ಭಟ ಗರಿಷ್ಠಕ್ಕೇರಿ ಇಳಿಮುಖದ ಹಾದಿಯಲ್ಲಿ ಸಾಗುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ನಿನ್ನೆ ಮತ್ತೆ ಹೊಸ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಸತತ ಎಂಟನೇ ದಿನ 60,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಕೇಸ್‍ಗಳು ವರದಿಯಾಗಿದೆ.

ಅಲ್ಲದೇ ಸತತ 11ನೇ ದಿನವೂ ಸಕ್ರಿಯ ಸೋಂಕು ಪ್ರಕರಣಗಳು 8 ಲಕ್ಷಕ್ಕಿಂತ ಕಡಿಮೆ ಮಟದಲ್ಲಿ ಇಳಿಮುಖದತ್ತ ಸಾಗಿದೆ.ಇದಲ್ಲದೇ ಎರಡು ತಿಂಗಳ ಬಳಿಕ ಆಕ್ಟಿವ್ ಕೇಸ್‍ಗಳು ಕಳೆದ ಮೂರು ದಿನಗಳಿಂದ 7 ಲಕ್ಷಕ್ಕಿಂತ ಕಡಿಮೆಗೆ ಇಳಿದಿದೆ. ಇದೇ ವೇಳೆ ಸಾವಿನ ಸಂಖ್ಯೆಯೂ ಗಣನೀಯವಾಗಿ ತಗ್ಗಿದೆ.

24 ತಾಸುಗಳ ಅವಯಲ್ಲಿ 45,148 ಮಂದಿಗೆ ಹೊಸದಾಗಿ ರೋಗ ಕಾಣಿಸಿಕೊಂಡಿದೆ. ಮೂರುವರೆ ತಿಂಗಳ ಬಳಿಕ ಇಷ್ಟು ಪ್ರಮಾಣಗಳಲ್ಲಿ ಪ್ರಕರಣಗಳು ತಗ್ಗಿರುವುದು ಇದೇ ಮೊದಲು. ದಿನನಿತ್ಯದ ಪಾಸಿಟಿವ್ ಕೇಸ್‍ಗಳಲ್ಲಿ ಸತತ ಎಂಟನೇ ದಿನ 60,000ಕ್ಕಿಂತ ಕಡಿಮೆ ವರದಿಯಾಗಿರುವುದು ಮತ್ತು ಇಳಿಮುಖದ ಹಾದಿಯ ಸ್ಪಷ್ಟ ಸೂಚನೆ ನೀಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ತಿಂಗಳಲ್ಲಿ ಎರಡನೇ ಬಾರಿ 50,000ಕ್ಕಿಂತ ಕಡಿಮೆ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಇದೇ ವೇಳೆ ದಿನನಿತ್ಯದ ಸಾವು ಪ್ರಕರಣಗಳಲ್ಲೂ ಇಳಿಕೆ ಕಂಡುಬಂದಿದ್ದು, 24 ತಾಸುಗಳ ಅವಯಲ್ಲಿ 480 ಮಂದಿ ಸೋಂಕು ರೋಗಕ್ಕೆ ಬಲಿಯಾಗಿದ್ದಾರೆ. ಮೂರುವರೆ ತಿಂಗಳ (108 ದಿನಗಳು) ಬಳಿಕ 500ಕ್ಕಿಂತ ಕಡಿಮೆ ಸಾವುಗಳು ದಾಖಲಾಗಿರುವುದು ಇದೇ ಮೊದಲು.

ಇವುಗಳ ನಡುವೆಯೂ ದೇಶದಲ್ಲಿ ಸೋಂಕಿತರ ಪ್ರಮಾಣ 79.08 ಲಕ್ಷ ಮತ್ತು ಮೃತರ ಸಂಖ್ಯೆ 1.19 ಲಕ್ಷ ದಾಟಿರುವುದು ಜನರಲ್ಲಿ ಆತಂಕ ಮುಂದುವರಿಯುವಂತೆ ಮಾಡಿದೆ. ಈವರೆಗೆ ಗುಣಮುಖರಾದ ಸೋಂಕಿತರ ಸಂಖ್ಯೆ 71.37 ಲಕ್ಷ ದಾಟಿದೆ. ಚೇತರಿಕೆ ಪ್ರಮಾಣ ಶೇ.90.23ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.50ರಷ್ಟು ತಗ್ಗಿದ್ದು, ಜನರಲ್ಲಿ ನಿರಾಳತೆ ಮೂಡಿದಿದೆ.

ದೇಶದಲ್ಲಿ ಮೃತರ ಸಂಖ್ಯೆ 1,19,014 ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ನಾಳೆ ರಾತ್ರಿ ವೇಳೆಗೆ ಎರಡು ಲಕ್ಷ ದಾಟುವ ಆತಂಕವೂ ಇದೆ. ಭಾರತದಲ್ಲಿ ಒಟ್ಟು ರೋಗಿಗಳ ಸಂಖ್ಯೆ 79,09,159ರಷ್ಟಿದ್ದು, ನಾಳೆ ವೇಳೆಗೆ 80 ಲಕ್ಷ ದಾಟುವ ಸಾಧ್ಯತೆ ಇದೆ.

ಆಗಸ್ಟ್ 7ರಂದು 20 ಲಕ್ಷ ಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆಪ್ಟೆಂಬರ್ 5ರಂದು 40 ಲಕ್ಷ ದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.16ರಂದು 50 ಲಕ್ಷ ದಾಟಿದೆ. ಸೆ.28ರಂದು 60 ಲಕ್ಷ ಮೀರಿದೆ. ಅ.11ರಂದು 70 ಲಕ್ಷ ತಲುಪಿದೆ.

45 ದಿನಗಳ ಬಳಿಕ ಕಳೆದ ಎಂಟು ದಿನಗಳಿಂದ ಆಕ್ಟಿವ್ ಕೇಸ್‍ಗಳು 8 ಲಕ್ಷಕ್ಕಿಂತ ಕಡಿಮೆ ಇಳಿದಿದ್ದು, ಕಳೆದ ಮೂರು ದಿನಗಳಿಂದಲೂ ಏಳು ಲಕ್ಷಕ್ಕಿಂತ ಕಡಿಮೆ ಮಟ್ಟದಲ್ಲಿ ಸಾಗಿದೆ. ನಿನ್ನೆ 6,53,717ರಷ್ಟು ದಾಖಲಾಗಿದೆ..

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲಿವೆ. ಆದರೂ ಚೇತರಿಕೆ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಮಹಾರಾಷ್ಟ್ರ ರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.

ಮತ್ತೊಂದು ಗಮನಾರ್ಹ ಸಂಗತಿ ಎಂದರೆ ಸೋಂಕು ಪ್ರಕರಣಗಳಲ್ಲಿ ಗರಿಷ್ಠ ಮಟ್ಟ ತಲುಪಿದ್ದ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ದಿನನಿತ್ಯದ ಪಾಸಿಟಿವ್ ಕೇಸ್‍ಗಳು ಕಡಿಮೆಯಾಗುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳ ಮುಂದುವರಿದಿದೆ.

ಈ ಮಧ್ಯೆ ಐಸಿಎಂಆರ್ ದೇಶಾದ್ಯಂತ ನಿನ್ನೆ 9.39 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸಿದ್ದು, ಈವರೆಗೆ 10.34 ಲಕ್ಷಕ್ಕೂ ಹೆಚ್ಚು ಜನರನ್ನು ಕೋವಿಡ್-19 ಸ್ಯಾಂಪಲ್ ಟೆಸ್ಟ್‍ಗೆ ಒಳಪಡಿಸಲಾಗಿದೆ.

Facebook Comments

Sri Raghav

Admin