ದೇಶದಲ್ಲಿ ಊಹೆಗೂ ಮೀರಿ ಹರಡುತ್ತಿದೆ ಕೊರೋನಾ, ಒಂದೇ ದಿನ 52,123 ಪಾಸಿಟಿವ್, 775 ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಜು.30- ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಆತಂಕಕಾರಿ ಮಟ್ಟದಲ್ಲೇ ಮುಂದುವರಿದಿದೆ. ವ್ಯಾಪಕ ಸೋಂಕು ಮತ್ತು ಸಾವು ಪ್ರಕರಣಗಳು ದೇಶದ ಎಲ್ಲ ರಾಜ್ಯಗಳಲ್ಲೂ ದಿನನಿತ್ಯದ ಸಾಮಾನ್ಯ ಸಂಗತಿಯಾಗಿದೆ.

ನಿನ್ನೆ ಒಂದೇ ದಿನ ಭಾರತದಲ್ಲಿ ಹೊಸ ದಾಖಲೆ ಪ್ರಮಾಣದಲ್ಲಿ ಅಂದರೆ 52,123 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸತತ ಎಂಟು ದಿನಗಳಿಂದಲೂ ದೇಶದಲ್ಲಿ ಸೋಂಕಿತರ ಸಂಖ್ಯೆ 45,000+ ಪ್ರಮಾಣದಲ್ಲೇ ಮುಂದುವರಿದಿರುವುದು ಚಿಂತಾಜನಕ ಸಂಗತಿಯಾಗಿದೆ.

24 ತಾಸುಗಳಲ್ಲಿ 775 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 35,000ಕ್ಕೇರಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16 ಲಕ್ಷ ಸನಿಹದಲ್ಲಿರುವುದು ಆತಂಕಕಾರಿ ವಿದ್ಯಮಾನವಾಗಿದೆ. ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 15.31 ಲಕ್ಷ ಹಾಗೂ ಸಾವಿನ ಸಂಖ್ಯೆ 34.968 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 16 ಲಕ್ಷ ದಾಟಲಿದೆ.

ದೇಶದಲ್ಲಿ ಈಗ 5,28,242 ಆಕ್ಟಿವ್ ಕೇಸ್‍ಗಳಿದ್ದು, 10,20,582 ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ನಿನ್ನೆವರೆಗೆ ಸುಮಾರು 1.82 ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಸೋಂಕು ಪರೀಕ್ಷೆ ಸಾಮಥ್ರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸತತ ನಾಲ್ಕನೇ ದಿನ ಐದು ಲಕ್ಷಕ್ಕೂ ಹೆಚ್ಚು ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ. ಸತತ ಎಂಟು ದಿನಗಳಿಂದಲೂ ದೇಶದಲ್ಲಿ ಪಾಸಿಟಿವ್ ಪ್ರಕರಣಗಳ ಪ್ರಮಾಣ 45.000ಕ್ಕೂ ಮೇಲ್ಪಟ್ಟ ಮಟ್ಟದಲ್ಲೇ ಮುಂದುವರಿದಿರುವುದು ಆತಂಕಕಾರಿ ಸಂಗತಿಯಾಗಿದೆ.

ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 775 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 35,000ಕ್ಕೇರಿದೆ.  ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.

ಈ ನಡುವೆ 24 ತಾಸುಗಳಲ್ಲಿ ಚೇತರಿಕೆ ಪ್ರಮಾಣದಲ್ಲಿ ಶೇ.64.44ರಷ್ಟು ಏರಿಕೆ ಕಂಡುಬಂದಿದೆ.
ಐಸಿಎಂಆರ್ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 1,81,90,382 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ನಿನ್ನೆ ಇಂದೇ ದಿನ ದೇಶಾದ್ಯಂತ ಸುಮಾರು 5 ಲಕ್ಷ ಮಂದಿಯ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದೆ. ಜುಲೈ ತಿಂಗಳಿನಲ್ಲಿ ಏರುಗತಿಯಲ್ಲಿ ಅಬ್ಬರಿಸಿ ಬೊಬ್ಬರಿದಿರುವ ಕೋವಿಡ್-19 ವೈರಸ್ ಆಗಸ್ಟ್‍ನಲ್ಲಿ ಮತ್ತಷ್ಟು ಉಗ್ರ ಸ್ವರೂಪ ತಾಳುವ ಆತಂಕವಿದೆ.

Facebook Comments

Sri Raghav

Admin