ಭಾರತದಲ್ಲಿ ಕೊರೋನಾ ರಣಕೇಕೆ : ಕಳೆದ 24 ಗಂಟೆಯಲ್ಲಿ 55,078 ಮಂದಿಗೆ ಪಾಸಿಟಿವ್, 779 ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಜು.31- ಈ ತಿಂಗಳ ಅಂತ್ಯದಲ್ಲೂ ಕಿಲ್ಲರ್ ಕೊರೊನಾ ದೇಶದಲ್ಲಿ ಅಬ್ಬರಿಸಿ ಬೊಬ್ಬಿರಿಸಿದೆ. ಸೋಂಕಿನ ಹಿಂದಿನ ಎಲ್ಲ ದಾಖಲೆಗಳನ್ನು ಮೀರಿರುವ ಹೆಮ್ಮಾರಿ 24 ತಾಸುಗಳಲ್ಲಿ 55,000ಕ್ಕೂ ಹೆಚ್ಚು ಜನರಿಗೆ ಸಾಂಕ್ರಾಮಿಕ ರೋಗಕ್ಕೆ ಕಾರಣವಾಗಿದೆ. ಭಾರತದಲ್ಲಿ ಸೋಂಕು ಪೀಡಿತರ ಪ್ರಮಾಣ 17 ಲಕ್ಷ ಮತ್ತು ಮೃತರ ಸಂಖ್ಯೆ 36,000 ಸನಿಹದಲ್ಲಿರುವುದು ಆಘಾತಕಾರಿಯಾಗಿದೆ.

ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಆತಂಕಕಾರಿ ಮಟ್ಟದಲ್ಲೇ ಮುಂದುವರಿದಿದೆ. ವ್ಯಾಪಕ ಸೋಂಕು ಮತ್ತು ಸಾವು ಪ್ರಕರಣಗಳು ದೇಶದ ಎಲ್ಲ ರಾಜ್ಯಗಳಲ್ಲೂ ದಿನನಿತ್ಯದ ಸಾಮಾನ್ಯ ಸಂಗತಿಯಾಗಿದೆ.

ನಿನ್ನೆ ಒಂದೇ ದಿನ ಭಾರತದಲ್ಲಿ ಹೊಸ ದಾಖಲೆ ಪ್ರಮಾಣದಲ್ಲಿ ಅಂದರೆ 55,078 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸತತ ಒಂಭತ್ತು ದಿನಗಳಿಂದಲೂ ದೇಶದಲ್ಲಿ ಸೋಂಕಿತರ ಸಂಖ್ಯೆ 45,000+ ಪ್ರಮಾಣದಲ್ಲೇ ಮುಂದುವರಿದಿರುವುದು ಚಿಂತಾಜನಕ ಸಂಗತಿಯಾಗಿದೆ. ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ ಪಾಸಿಟಿವ್ ಕೇಸ್‍ಗಳು 55,000 ದಾಟಿರುವುದು ಇದೇ ಮೊದಲು.

ಆಗಸ್ಟ್‍ನಲ್ಲಿ ಡೆಡ್ಲಿ ಕೊರೊನಾ ಹಾವಳಿ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮುನ್ಸೂಚನೆಗೆ ಪುಷ್ಟಿ ನೀಡುವಂತೆ ಜುಲೈ ತಿಂಗಳಾಂತ್ಯದಲ್ಲಿ 55,000ಕ್ಕೂ ಮೇಲ್ಪಟ್ಟು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

24 ತಾಸುಗಳಲ್ಲಿ 779 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 35,750ಕ್ಕೇರಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17 ಲಕ್ಷ ಸನಿಹದಲ್ಲಿರುವುದು ಆತಂಕಕಾರಿ ವಿದ್ಯಮಾನವಾಗಿದೆ.

ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 16.38,870 ಹಾಗೂ ಸಾವಿನ ಸಂಖ್ಯೆ 35,750 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 17 ಲಕ್ಷ ಮತ್ತು ಮೃತರ ಸಂಖ್ಯೆ 36,250 ದಾಟಲಿದೆ.

ದೇಶದಲ್ಲಿ ಈಗ 5,45,318 ಆಕ್ಟಿವ್ ಕೇಸ್‍ಗಳಿದ್ದು, 10,57,807 ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ನಿನ್ನೆವರೆಗೆ ಸುಮಾರು 1.87 ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಸೋಂಕು ಪರೀಕ್ಷೆ ಸಾಮಥ್ರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸತತ ಐದನೇ ದಿನ ಐದು ಲಕ್ಷಕ್ಕೂ ಹೆಚ್ಚು ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಸದ್ಯದಲ್ಲೇ ಸ್ಯಾಂಪಲ್ ಪರೀಕ್ಷಾ ಸಾಮಥ್ರ್ಯವನ್ನು ಪ್ರತಿದಿನ 10 ಲಕ್ಷಕ್ಕೇರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ತಿಳಿಸಿದ್ದಾರೆ.

ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 779 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 35,750ಕ್ಕೇರಿದೆ. ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆಯಲ್ಲಿಯೂ ಆತಂಕಕಾರಿ ಹೆಚ್ಚಳವಾಗಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.

#ಆಗಸ್ಟ್ ನಲ್ಲಿ ಭಾರೀ ಕಂಟಕ :
ಜುಲೈ ತಿಂಗಳಿನಲ್ಲಿ ಏರುಗತಿಯಲ್ಲಿ ಅಬ್ಬರಿಸಿ ಬೊಬ್ಬರಿದಿರುವ ಕೋವಿಡ್-19 ವೈರಸ್ ಆಗಸ್ಟ್‍ನಲ್ಲಿ ಮತ್ತಷ್ಟು ಉಗ್ರ ಸ್ವರೂಪ ತಾಳುವ ಆತಂಕವಿದೆ.  ಆರೋಗ್ಯ ತಜ್ಞರು ಎಚ್ಚರಿಕೆ ನೀಡಿರುವಂತೆ ಆಗಸ್ಟ್‍ನಲ್ಲಿ ಪ್ರತಿದಿನ ಸರಾಸರಿ 60,000 ಸೋಂಕು ರೋಗಿಗಳು ವರದಿಯಾಗುತ್ತವೆ. ಸೆಪ್ಟೆಂಬರ್ ಮಧ್ಯಭಾಗದ ನಂತರ ಕೊರೊನಾ ಹಾವಳಿ ಕ್ರಮೇಣ ಕಡಿಮೆಯಾಗುತ್ತದೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

Facebook Comments

Sri Raghav

Admin