ಭಾರತದಲ್ಲಿ 24 ಗಂಟೆಗಳಲ್ಲಿ 29 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.13- ಕೋವಿಡ್ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 29 ಸಾವಿರಕ್ಕೂ ಹೆಚ್ಚು ಮಂದಿಗೆ ಮಹಾಮಾರಿ ತಗುಲಿದೆ.

ಇದೇ ವೇಳೆ 500ಕ್ಕೂ ಹೆಚ್ಚು ಮಂದಿ ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಕೋವಿಡ್ ಪೀಡಿತರ ಸಂಖ್ಯೆ ದೇಶದಲ್ಲಿ ಈಗ 9 ಲಕ್ಷ ಗಡಿಗೆ ಬಂದುನಿಂತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ ಬಿಡುಗಡೆಯಾದ ಸೋಂಕಿತರ ಪಟ್ಟಿಯಲ್ಲಿ ಇಂದು ಬೆಳಗ್ಗೆ 8 ಗಂಟೆ ವೇಳೆ ಅಧಿಕಾರಿಗಳು ನೀಡಿರುವ ಮಾಹಿತಿ ಸಾರ್ವಕಾಲಿಕ ದಾಖಲೆಯಾಗಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಸೋಂಕಿತರಿಂದ ಬಾಧಿತÁಗಿದ್ದು , ದೆಹಲಿ, ತಮಿಳುನಾಡು, ಹರಿಯಾಣ, ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳು ಸ್ಥಾನ ಪಡೆದಿವೆ.

ಈ ರಾಜ್ಯಗಳಲ್ಲಿ ಈಗಾಗಲೇ ಕೆಲವು ಪಟ್ಟಣಗಳನ್ನು ಸೀಲ್‍ಡೌನ್ ಮಾಡಲಾಗಿದ್ದು, ಶತಾಯಗತಾಯ ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪ್ರಯತ್ನ ಮುಂದುವರೆಸಿದೆ.

Facebook Comments

Sri Raghav

Admin