ಭಾರತದಲ್ಲಿ ಸತತ 7ನೇ ದಿನ 45,000+ ಮಂದಿಗೆ ಕೊರೋನಾ, 34,193 ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಜು.29-ದೇಶದಲ್ಲಿ ಕಿಲ್ಲರ್ ಕೊರೊನಾ ವೈರಸ್ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವ್ಯಾಪಕ ಸೋಂಕು ಮತ್ತು ಸಾವು ಪ್ರಕರಣಗಳು ದೇಶದ ಎಲ್ಲ ರಾಜ್ಯಗಳಲ್ಲೂ ದಿನನಿತ್ಯದ ಸಾಮಾನ್ಯ ಸಂಗತಿಯಾಗಿದೆ.

ಸತತ ಏಳು ದಿನಗಳಿಂದಲೂ ದೇಶದಲ್ಲಿ ಸೋಂಕಿತರ ಸಂಖ್ಯೆ 45,000+ ಪ್ರಮಾಣದಲ್ಲೇ ಮುಂದುವರಿದಿರುವುದು ಚಿಂತಾಜನಕ ಸಂಗತಿಯಾಗಿದೆ.  24 ತಾಸುಗಳಲ್ಲಿ 48,513 ಹೊಸ ಸಾಂಕ್ರಾಮಿಕ ರೋಗ ಪ್ರಕರಣಗಳು ವರದಿಯಾಗಿದೆ. ಅಲ್ಲದೆ, ಒಂದೇ ದಿನ 768 ಸಾವುಗಳು ಸಂಭವಿಸಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16 ಲಕ್ಷ ಸನಿಹದಲ್ಲಿರುವುದು ಆತಂಕಕಾರಿ ವಿದ್ಯಮಾನವಾಗಿದೆ.

ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 15.31 ಲಕ್ಷ ಹಾಗೂ ಸಾವಿನ ಸಂಖ್ಯೆ 34,193 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 16 ಲಕ್ಷ ದಾಟಲಿದೆ. ದೇಶದಲ್ಲಿ ಈಗ 5,09,447 ಆಕ್ಟಿವ್ ಕೇಸ್‍ಗಳಿದ್ದು, 9.88 ಲಕ್ಷ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ನಿನ್ನೆವರೆಗೆ ಸುಮಾರು 1.78 ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಸೋಂಕು ಪರೀಕ್ಷೆ ಸಾಮಥ್ರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸತತ ಮೂರನೆ ದಿನ ಐದು ಲಕ್ಷಕ್ಕೂ ಹೆಚ್ಚು ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ. ನಿನ್ನೆ ಒಂದೇ ದಿನ (24 ಗಂಟೆಗಳ ಅವಧಿ) 48,513 ಪಾಸಿಟಿವ್ ಕೇಸ್‍ಗಳು ದಾಖಲಾಗಿವೆ. ಇಂದು ಬೆಳಗಿನ ವರದಿ ಪ್ರಕಾರ ಸೋಂಕಿತರ ಸಂಖ್ಯೆ 50,000 ದಾಟಿದೆ.

ಸತತ ಏಳು ದಿನಗಳಿಂದಲೂ ದೇಶದಲ್ಲಿ ಪಾಸಿಟಿವ್ ಪ್ರಕರಣಗಳ ಪ್ರಮಾಣ 45,000ಕ್ಕೂ ಮೇಲ್ಪಟ್ಟ ಮಟ್ಟದಲ್ಲೇ ಮುಂದುವರಿದಿರುವುದು ಆತಂಕಕಾರಿ ಸಂಗತಿಯಾಗಿದೆ.  ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 768 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 34,193ಕ್ಕೇರಿದೆ.

ಭಾರತದಲ್ಲಿ. ಸೋಂಕು ಪೀಡಿತರ ಸಂಖ್ಯೆ 15,31,669 ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.  ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.

ಈ ನಡುವೆ 24 ತಾಸುಗಳಲ್ಲಿ ಚೇತರಿಕೆ ಪ್ರಮಾಣದಲ್ಲಿ ಶೇ.64.51ರಷ್ಟು ಏರಿಕೆ ಕಂಡುಬಂದಿದ್ದು, 9,88,029 ರೋಗಿಗಳು ಗುಣಮುಖರಾಗಿರುವುದು ಸಮಾಧಾನಕಾರ ಸಂಗತಿ. ದೇಶದಲ್ಲಿ ಈವರೆಗೆ ಮರಣ ಪ್ರಮಾಣ ಶೇ.2.25ರಷ್ಟಿದೆ.

ಐಸಿಎಂಆರ್ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 1,77,43,743 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ನಿನ್ನೆ ಇಂದೇ ದಿನ ದೇಶಾದ್ಯಂತ ಸುಮಾರು 5 ಲಕ್ಷ ಮಂದಿಯ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದೆ.

Facebook Comments

Sri Raghav

Admin