ದೇಶದಲ್ಲಿ 14.35 ಲಕ್ಷಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 32,772 ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಜು.27-ಭಾರತದಲ್ಲಿ ಡೆಡ್ಲಿ ಕೊರೊನಾ ರೌದ್ರಾವತಾರ ಮತ್ತಷ್ಟು ವಿಕೋಪಕ್ಕೆ ತಿರುಗಿದೆ. ದಿನೇ ದಿನೇ ಸೋಂಕು ಮತ್ತು ಸಾವು ಪ್ರಕರಣಗಳು ಅತಿ ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಭಾರತೀಯರನ್ನು ತೀವ್ರ ಚಿಂತೆಗೀಡು ಮಾಡಿದೆ. ಸತತ ಐದು ದಿನಗಳಿಂದಲೂ ದೇಶದಲ್ಲಿ ಸೋಂಕಿತರ ಸಂಖ್ಯೆ 50,000+ ಪ್ರಮಾಣದಲ್ಲೇ ಮುಂದುವರಿದಿದೆ.

24 ತಾಸುಗಳಲ್ಲಿ ಕೋವಿಡ್ ವೈರಾಣು ದಾಳಿ ಆಘಾತಕಾರಿ ಮಟ್ಟದಲ್ಲೇ ಪುನರಾವರ್ತನೆಯಾಗುತ್ತಿದ್ದು, ಮತ್ತೆ ಸುಮಾರು 50,000 ಹೊಸ ಸಾಂಕ್ರಾಮಿಕ ರೋಗ ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಒಂದೇ ದಿನ 708 ಸಾವುಗಳು ಸಂಭವಿಸಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷ ಸನಿಹದಲ್ಲಿರುವುದು ಆತಂಕಕಾರಿ ವಿದ್ಯಮಾನವಾಗಿದೆ.

ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 14.35 ಲಕ್ಷ ಹಾಗೂ ಸಾವಿನ ಪ್ರಮಾಣ 32,772 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 14 ಲಕ್ಷ ದಾಟಲಿದೆ..

ದೇಶದಲ್ಲಿ ಈಗ 4.85 ಲಕ್ಷ ಆಕ್ಟಿವ್ ಕೇಸ್‍ಗಳಿದ್ದು, 9.17 ಲಕ್ಷ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಕ್ರಿಯ ಪ್ರಕರಣಗಳ ದಿನೇ ದಿನೇ ತೀವ್ರ ಏರಿಕೆ ಕಂಡುಬರುತ್ತಿರುವುದು ದೇಶದ ಜನರನ್ನು ಮತ್ತಷ್ಟು ಭಯಭೀತಗೊಳಿಸಿದೆ. ದೇಶದಲ್ಲಿ ನಿನ್ನೆವರೆಗೆ 1.68 ಕೋಟಿಗೂ ಅಧಿಕ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಸೋಂಕು ಪರೀಕ್ಷೆ ಸಾಮಥ್ರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ನಿನ್ನೆ ಒಂದೇ ದಿನ (24 ಗಂಟೆಗಳ ಅವಧಿ) 49,931 ಪಾಸಿಟಿವ್ ಕೇಸ್‍ಗಳು ದಾಖಲಾಗಿವೆ. ಇಂದು ಬೆಳಗಿನ ವರದಿ ಪ್ರಕಾರ ಸೋಂಕಿತರ ಸಂಖ್ಯೆ 50,000 ದಾಟಿದೆ. ಸತತ ಐದು ದಿನಗಳಿಂದಲೂ ದೇಶದಲ್ಲಿ ಪಾಸಿಟಿವ್ ಪ್ರಕರಣಗಳ ಪ್ರಮಾಣ 50,000 ಮಟ್ಟದಲ್ಲೇ ಮುಂದುವರಿದಿರುವುದು ಆತಂಕಕಾರಿ ಸಂಗತಿಯಾಗಿದೆ.

ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 708 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 32,772ಕ್ಕೇರಿದೆ. ಭಾರತದಲ್ಲಿ. ಸೋಂಕು ಪೀಡಿತರ ಸಂಖ್ಯೆ 14.35,453ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ 24 ತಾಸುಗಳಲ್ಲಿ ಚೇತರಿಕೆ ಪ್ರಮಾಣದಲ್ಲಿ ಶೇ.63.92ರಷ್ಟು ಏರಿಕೆ ಕಂಡುಬಂದಿದ್ದು, 9.17,567 ಲಕ್ಷ ರೋಗಿಗಳು ಗುಣಮುಖರಾಗಿರುವುದು ಸಮಾಧಾನಕಾರ ಸಂಗತಿ.

ಐಸಿಎಂಆರ್ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 1,68,06,803 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ನಿನ್ನೆ ಇಂದೇ ದಿನ ದೇಶಾದ್ಯಂತ 5,15,472 ಮಂದಿಯ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದೆ.

Facebook Comments

Sri Raghav

Admin