ಭಾರತದಲ್ಲಿ ಒಂದೇ ದಿನ 1,007 ಕೊರೋನಾಗೆ ಬಲಿ, 62,064 ಮಂದಿಗೆ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.10-ದೇಶದಲ್ಲಿ ಆಗಸ್ಟ್ ಎರಡನೇ ವಾರದಲ್ಲೂ ಕಿಲ್ಲರ್ ಕೊರೊನಾ ರೌದ್ರಾವತಾರ ಮತ್ತಷ್ಟು ತೀವ್ರವಾಗಿದೆ. ಕೋವಿಡ್-19 ವೈರಸ್ ರೋಗ ಉಲ್ಬಣದ ಮಹಾ ಸೋಟ ಮರುಕಳಿಸುತ್ತಲೇ ಇದೆ.

ಭಾರತದಲ್ಲಿ ಸತತ ನಾಲ್ಕನೇ ದಿನ 60,000+ ಪ್ರಮಾಣ ವರದಿಯಾಗಿರುವುದು ಮುಂದಿನ ಗಂಡಾಂತರಕಾರಿ ದಿನಗಳಿಗೆ ಸ್ಪಷ್ಟ ಮನ್ಸೂಚನೆಯಾಗಿದೆ. 24 ತಾಸುಗಳ ಅವಯಲ್ಲಿ 62,064 ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಯಲ್ಲಿ 1,007 ರೋಗಿಗಳು ಮೃತಪಟ್ಟಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 22.15 ಲಕ್ಷ ದಾಟಿರುವುದು ಮತ್ತು ಮೃತರ ಸಂಖ್ಯೆ 45,000 ಸನಿಹದಲ್ಲಿರುವುದು ಆತಂಕಕಾರಿ ಸಂಗತಿಯಾಗಿದೆ.. ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದರ ನಡುವೆಯೂ 15.35 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಸಾವಿನ ಕುಣಿಕೆಯಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.69.33ರಷ್ಟು ಏರಿಕೆ ಕಂಡು ಬಂದಿದೆ.

ನಿನ್ನೆಯಿಂದ ಇಂದು ಬೆಳಗ್ಗೆವರೆಗೆ 62,064 ಜನರಿಗೆ ಸಾಂಕ್ರಾಮಿಕ ರೋಗ ತಗುಲಿದೆ. ದೇಶದಲ್ಲಿ ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 60.000+ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ಇದು ಸತತ ನಾಲ್ಕನೇ ದಿನ.

ಸತತ 12 ದಿನಗಳಿಂದ 50,000+ ಹಾಗೂ 19 ದಿವಸಗಳಿಂದಲೂ ನಿರಂತರವಾಗಿ ದೇಶದಲ್ಲಿ ಸೋಂಕಿತರ ಸಂಖ್ಯೆ 45,000+ ಪ್ರಮಾಣದಲ್ಲೇ ಮುಂದುವರಿದಿರುವುದು ಚಿಂತಾಜನಕ ಸಂಗತಿಯಾಗಿದೆ. 24 ತಾಸುಗಳಲ್ಲಿ 1,007 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 44,386ಕ್ಕೇರಿದೆ.

ಈವರೆಗೆ ಭಾರತದಲ್ಲಿ ರೋಗ ಪೀಡಿತರ ಪ್ರಮಾಣ 22,15,074 ದಾಟಿರುವುದು ಕಳವಳಕಾರಿ ಸಂಗತಿಯಾಗಿದೆ. ನಾಳೆ ವೇಳೆಗೆ ರೋಗ ಪೀಡಿತರ ಸಂಖ್ಯೆ 23 ಲಕ್ಷ ಮತ್ತು ಮೃತರ ಸಂಖ್ಯೆ 45,000 ದಾಟಲಿದೆ.

ದೇಶದಲ್ಲಿ ಈಗ 6,34,945 ಆಕ್ಟಿವ್ ಕೇಸ್‍ಗಳಿದ್ದು, 15,35,743 ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.69.33 ಮತ್ತು ಸಾವಿನ ಪ್ರಮಾಣ ಶೇ.2ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ಅಕ ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇವೆ.
ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ 4,71,023 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 2,45,83,558 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin