BREAKING : ರಾಜ್ಯದಲ್ಲಿಂದು ಮಹಾಮಾರಿಗೆ 517 ಮಂದಿ ಬಲಿ, 39998 ಹೊಸ ಕೇಸ್ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಹಾಮಾರಿಗೆ ಇಂದು ರಾಜ್ಯದಲ್ಲಿ 517 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39998 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2053191 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 20 ಸಾವಿರದ ಗಡಿ ದಾಟಿದೆ. ( ಈವರೆಗೆ ಒಟ್ಟು 20368 ಸಾವು)

ಇಂದು ಬೆಂಗಳೂರಿನಲ್ಲಿ ಕೊರೋನಾ ಮಾಹಾಸ್ಪೋಟವಾಗಿದ್ದು 16286 ಜನರಿಗೆ ಕೊರೋನಾ ತಗುಲಿದ್ದು, 275 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 999805 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 8964 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು ರಾಜ್ಯಾದ್ಯಂತ 34752 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1440621 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲಾವಾರು ಸೋಂಕಿತ ಸಂಖ್ಯೆ ಕೆಳಕಂಡಂತಿದೆ :

Facebook Comments

Sri Raghav

Admin