ಭಾರತದಲ್ಲಿ ಒಂದೇ ದಿನ 2,293 ಮಂದಿಗೆ ಕೊರೋನಾ, ಸಾವಿನ ಸಂಖ್ಯೆ 1,218ಕ್ಕೇರಿಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಮೇ 2- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಮ್ಮಾರಿ ನಿಗ್ರಹಕ್ಕಾಗಿ ಶತ ಪ್ರಯತ್ನಗಳನ್ನು ಮುಂದುವರಿಸಿದ್ದರೂ, ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ನಿನ್ನೆ ಒಂದೇ ದಿನ ದೇಶದ ವಿವಿಧೆಡೆ 2,293 ಮಂದಿಯಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗಿರುವುದು ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ.

ಕಿಲ್ಲರ್ ಕೊರೊನಾ ನಿಗ್ರಹಿಸಲು ಕೇಂದ್ರ ಸರ್ಕಾರ ಜÁರಿಗೊಳಿಸಿರುವ ಎರಡನೇ ಹಂತದ ಲಾಕ್‍ಡೌನ್ ನಾಳೆ ಅಂತ್ಯಗೊಳ್ಳಲಿದೆ. 40 ದಿನಗಳ ಭಾರತ ದಿಗ್ಬಂಧನದ ನಂತರ ಮೇ 4 ರಿಂದ 17ವರೆಗೆ 14 ದಿನಗಳ ಲಾಕ್-3 ಜಾರಿಗೆ ಬರಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಮ್ಮಾರಿ ನಿಗ್ರಹಕ್ಕಾಗಿ ಶತ ಪ್ರಯತ್ನಗಳನ್ನು ಮುಂದುವರಿಸಿದ್ದರೂ, ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ಶೇಕಡ 25.43ರಷ್ಟು(ಕಳೆದ 3 ದಿನಗಳಿಗಿಂತ ತುಸು ಹೆಚ್ಚು) ಸುಧಾರಣೆ ಕಂಡುಬಂದಿದ್ದರೂ, ಮತ್ತೊಂದೆಡೆ ದಿನನಿತ್ಯ ಮರಣ ಮತ್ತು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಲೇ ಇರುವುದು ದೇಶದ ಜನರನ್ನು ಚಿಂತಾಕ್ರಾಂತವನ್ನಾಗಿ ಮಾಡಿದೆ.

24 ತಾಸುಗಳ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ 2,293 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ನಿನ್ನೆ 67 ಮಂದಿಯನ್ನು ಮಹಾಮಾರಿ ನುಂಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಭಾರತದಲ್ಲಿ ಮೃತರ ಸಂಖ್ಯೆ 1,218ಕ್ಕೇರಿದೆ.. ಮತ್ತೊಂದಡೆ ಸೋಂಕು ಪೀಡಿತರ ಸಂಖ್ಯೆ 37,336ಕ್ಕೇರಿದೆ.

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, 26,147ರಷ್ಟಿದೆ. ಈ ಮಧ್ಯೆ, ಈವರೆಗೆ 9,950 ಮಂದಿ ಗುಣಮುಖರಾಗಿ ಮನೆಗಳಿಗೆ ಮರಳಿದ್ದಾರೆ. ದೇಶದಲ್ಲಿ ವೈರಾಣು ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ವೃದ್ದಿ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾದರೂ, ಮತ್ತೊಂದಡೆ ಸೋಂಕು ಮತ್ತು ಸಾವು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ.

ಇಂದು ಬೆಳಗ್ಗೆಯೂ ಕೆಲವು ರಾಜ್ಯಗಳಲ್ಲಿ ಸಾವು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಆಂಧ್ರಪ್ರದೇಶ, ಓಡಿಶಾ, ಬಿಹಾರ ಮತ್ತಿತರ ರಾಜ್ಯಗಳಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ತಾಸುಗಳ ಅವಧಿಯಲ್ಲಿ ಒಟ್ಟು 67 ಮಂದಿಯನ್ನು ಕೊರೊನಾ ಬಲಿ ಪಡೆದಿದೆ. ಮಹಾರಾಷ್ಟ್ರ -26, ಗುಜರಾತ್-22, ಮಧ್ಯಪ್ರದೇಶ-8 ರಾಜಸ್ತಾನ-4, ದೆಹಲಿ-2 ಹಾಗೂ ಉತ್ತರ ಪ್ರದೇಶ, ಬಿಹಾರ, ಹರಿಯಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ತಲಾ ಒಂದೊಂದು ಸಾವು ವರದಿಯಾಗಿವೆ.

ಈವರೆಗೆ ಸಂಭವಿಸಿರುವ 1,218 ಸಾವು ಪ್ರಕರಣಗಳಲ್ಲಿ, ಮಹಾರಾಷ್ಟ್ರ ಎಂದಿನಂತೆ ಪ್ರಥಮ ಸ್ಥಾನದಲ್ಲಿಯೇ ಮುಂದುವರಿದಿದೆ. ಆ ರಾಜ್ಯದಲ್ಲಿ ಒಟ್ಟು 485 ಸಾವುಗಳು ವರದಿಯಾಗಿವೆ.  ನಂತರದ ಸ್ಥಾನಗಳಲ್ಲಿ ಗುಜರಾತ್ (236), ಮಧ್ಯಪ್ರದೇಶ (145), ರಾಜಸ್ತಾನ (62), ದೆಹಲಿ (61), ಉತ್ತರ ಪ್ರದೇಶದ (42), ಪಶ್ಚಿಮ ಬಂಗಾಳ-ಮತ್ತು ಆಂಧ್ರಪ್ರದೇಶ (33), ತಮಿಳುನಾಡು (28), ತೆಲಂಗಾಣ(26), ಕರ್ನಾಟಕ (23) ಹಾಗೂ ಪಂಜಾಬ್ (19) ರಾಜ್ಯಗಳಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎಂಟು, ಕೇರಳ ಮತ್ತು ಹರಿಯಾಣದಲ್ಲಿ ತಲಾ ನಾಲ್ಕು, ಜಾರ್ಖಂಡ್ ಮತ್ತು ಬಿಹಾರದಲ್ಲಿ ತಲಾ ಮೂರು, ಮೇಘಾಲಯ, ಹಿಮಾಚಲ ಪ್ರದೇಶ, ಒಡಿಶಾ ಮತ್ತು ಅಸ್ಸಾಂ ರಾಜ್ಯಗಳಲ್ಲಿ ತಲಾ ಒಂದೊಂದು ಸಾವುಗಳು ವರದಿಯಾಗಿವೆ.

ಇನ್ನು ಹಲವು ರಾಜ್ಯಗಳಲ್ಲಿ ಕಳೆದ 12 ತಾಸುಗಳ ಅವಧಿಯಲ್ಲಿ ಹೊಸ ಸೋಂಕು ಮತ್ತು ಸಾವು ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿಯಾಗಿದೆ.
ಮಹಾರಾಷ್ಟ್ರದಲ್ಲಿ ಸೋಂಕು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ರಾಜಸ್ತಾನ, ಆಂಧ್ರಪ್ರದೇಶ, ಶಾ ರಾಜ್ಯಗಳಲ್ಲೂ ಹೊಸ ಸಾಂಕ್ರಮಿಕ ಪ್ರಕರಣಗಳು ದಾಖಲಾಗಿವೆ.

Facebook Comments

Sri Raghav

Admin