ವಿಶ್ವದಾದ್ಯಂತ ಕಿಲ್ಲರ್ ಕೊರೋನಾಗೆ 3.36 ಲಕ್ಷ ಬಲಿ ,52 ಲಕ್ಷ ಮಂದಿಗೆ ಸೋಂಕು..!

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ಮಾಸ್ಕೋ/ಮ್ಯಾಡ್ರಿಡ್, ಮೇ 22- ಅಪಾಯಕಾರಿ ಕೊರೊನಾ ವೈರಾಣು ದಾಳಿ ವಿಶ್ವಾದ್ಯಂತ ಮತ್ತಷ್ಟುತಿ ೀವ್ರ ಗೊಂಡಿದೆ. ಈ ಹೆಮ್ಮಾರಿ ಸುಮಾರು 250 ದೇಶಗಳಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 3.36 ಲಕ್ಷಜನರನ್ನು ಬಲಿ ಪಡೆದಿದೆ. ಅಲ್ಲದೇ ಸುಮಾರು 52 ಲಕ್ಷ ಮಂದಿ ಸೋಂಕು ರೋಗದಿಂದ ಬಳಲುತ್ತಿದ್ದಾರೆ.

ಆತಂಕಕಾರಿ ಸಂಗತಿಎಂದರೆ ಕಳೆದ 24 ತಾಸುಗಳಲ್ಲಿ ವಿಶ್ವದಾದ್ಯಂತ 1 ಲಕ್ಷಕ್ಕೂಅಧಿಕ ಮಂದಿಗೆ ಸೋಂಕು ತಗುಲಿದೆ. ಜಗತ್ತಿನಾದ್ಯಂತ ಈವರೆಗೆ 3.34,672 ಮಂದಿ ಸಾವಿಗೀಡಾಗಿದ್ದು, 51,97,739 ಸೋಂಕು ಪ್ರಕರಣಗಳು ವರದಿಯಾಗಿವೆ.

ಸಾಂಕ್ರಾಮಿಕರೋಗ ಪೀಡಿತರಲ್ಲಿ ಸುಮಾರು 45,621 ಮಂದಿ ಸ್ಥಿತಿ ಗಂಭೀರವಾಗಿದ್ದು, ಮರಣ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಇಂದು ಸಂಜೆ ವೇಳೆಗೆ ಮೃತರ ಸಂಖ್ಯೆ 3.40 ಲಕ್ಷ ಮತ್ತು ಸೋಂಕಿತರ ಸಂಖ್ಯೆ53 ಲಕ್ಷ ಮೀರುವ ಆತಂಕವಿದೆ. ಈ ಮಧ್ಯೆ, ರೋಗಿಗಳ ಚೇತರಿಕೆ ಪ್ರಮಾಣದಲ್ಲಿಯೂ ವೃದ್ದಿ ಕಂಡುಬಂದಿವೆ.

20,80,411 ಮಂದಿಸೋಂಕು ಪೀಡಿತರು ಚೇತರಿಸಿಕೊಂಡಿರುವುದು ಮತ್ತು ಗುಣಮುಖರಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಅಮೆರಿಕ, ರಷ್ಯಾ, ಸ್ಪೇನ್, ಬ್ರೆಜಿಲ್ ಮತ್ತು ಇಂಗ್ಲೆಂಡ್ – ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದಟಾಪ್ ಫೈವ್ ದೇಶಗಳಾಗಿವೆ. ಭಾರೀ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಲ್ಲಿ ಇಟಲಿ, ಫ್ರಾನ್ಸ್, ಜರ್ಮನಿ, ಟರ್ಕಿ ಮತ್ತುಇರಾನ್ ದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವು ಪಟ್ಟಿಯಲ್ಲಿ ಭಾರತ 11ನೇ ಸ್ಥಾನದಲ್ಲಿದೆ.

ಏಷ್ಯಾಖಂಡದಲ್ಲಿ ಪಾಕಿಸ್ತಾನ ಸೇರಿದಂತೆ ಅನೇಕ ದೇಶಗಳಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿಏರಿಕೆಯಾಗಿದೆ. ಕೊರೊನಾ ವೈರಸ್‍ಕೇಂದ್ರ ಬಿಂದುಚೀನಾದಲ್ಲೂ ಹೊಸ ಪಾಸಿಟಿವ್ ಕೇಸ್‍ಗಳು ಕಂಡುಬರುತ್ತಿವೆ.

ಜಗತ್ತಿನ 250ಕ್ಕೂ ಹೆಚ್ಚು ದೇಶಗಳು ಸತತಐದು ತಿಂಗಳುಗಳಿಂದ ಕೊರೊನಾ ನಿಗ್ರಹಕ್ಕಾಗಿ ನಿರಂತರ ಹೋರಾಟ ಮುಂದುವರಿಸಿದ್ದರೂ ಹೆಮ್ಮಾರಿ ನಿಯಂತ್ರಣ ಸಾಧ್ಯವಾಗದಿರುವುದು ಭಾರೀ ಕಳವಳಕಾರಿಯಾಗಿದೆ.

Facebook Comments

Sri Raghav

Admin